ADVERTISEMENT

ಕೊಪ್ಪಳ | ಅಂಜನಾದ್ರಿ ಅಭಿವೃದ್ಧಿಗೆ ಮುಖ್ಯಮಂತ್ರಿ ‌ಭೂಮಿಪೂಜೆ ಇಂದು

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2023, 6:08 IST
Last Updated 14 ಮಾರ್ಚ್ 2023, 6:08 IST
   

ಅಂಜನಾದ್ರಿ (ಗಂಗಾವತಿ): ಹನುಮ‌ ಜನಿಸಿದ‌ ನಾಡು ಎಂದು ಹೆಸರಾದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಭೂಮಿ ಪೂಜೆ ನೆರವೇರಿಸುವರು.

ಇದಕ್ಕಾಗಿ ಸರ್ಕಾರ ₹120 ಕೋಟಿ ಮೀಸಲಿಟ್ಟಿದೆ.

ಬಳಿಕ ಗಂಗಾವತಿಯ ತಾಲ್ಲೂಕು ಕ್ರೀಡಾಂಗಣದಲ್ಲಿ ಬೊಮ್ಮಾಯಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಫಲಾನುಭವಿಗಳ ಸಮ್ಮೇಳನಕ್ಕೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

ADVERTISEMENT

ಪೆಂಡಾಲ್, ಬೃಹತ್ ವೇದಿಕೆ, ಗಣ್ಯವ್ಯಕ್ತಿಗಳ ಆಸನ ಸೇರಿ 30 ಸಾವಿರ ಜನ ಕುಳಿತುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ.
ಭದ್ರತೆಗಾಗಿ 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ತ್ವರಿತಗತಿ ಕಾಮಗಾರಿ: ಅಂಜನಾದ್ರಿ ಬೆಟ್ಟದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆಗೆ ಸಿಎಂ ಆಗಮಿಸುತ್ತಿದ್ದು, ಗಂಗಾವತಿ ಕ್ಷೇತ್ರದಲ್ಲಿ ರಸ್ತೆ ಕಾಮಗಾರಿಗಳನ್ನು ನಡೆಸಲಾಗಿದೆ.

ಕ್ಯಾಮೆರಾ ಅಳವಡಿಕೆ: ಅಂಜನಾದ್ರಿಗೆ ಮುಖ್ಯಮಂತ್ರಿ ಭೇಟಿ ನೀಡುತ್ತಿರುವ ಕಾರಣ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಲು ಅಧಿಕಾರಿಗಳು ಆನೆಗೊಂದಿ ಉತ್ಸವದ ಬಯಲು, ಚಿಕ್ಕರಾಂಪುರ, ಅಂಜನಾದ್ರಿ ಮುಖ್ಯದ್ವಾರ, ಪೂಜಾ ಸ್ಥಳ ಸೇರಿ ವಿವಿಧ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.