ADVERTISEMENT

ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನಕ್ಕೆ ಕ್ಷಣಗಣನೆ

​ಪ್ರಜಾವಾಣಿ ವಾರ್ತೆ
Published 28 ಜುಲೈ 2021, 5:04 IST
Last Updated 28 ಜುಲೈ 2021, 5:04 IST
ನಿಯೋಜಿತ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಇಂದು ಮುಂಜಾನೆ ನಿರ್ಗಮಿತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದರು.
ನಿಯೋಜಿತ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಇಂದು ಮುಂಜಾನೆ ನಿರ್ಗಮಿತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದರು.    

ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಿಗ್ಗೆ 11 ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ಅದಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೆಲವೇ ಹೊತ್ತಿನಲ್ಲಿ ಬೊಮ್ಮಾಯಿ ರಾಜಭವನಕ್ಕೆ ಬರಲಿದ್ದಾರೆ.

ಪ್ರಮಾಣ ವಚನ ಸಮಾರಂಭಕ್ಕೆ ರಾಜಭವನ ಗಾಜಿನ ಮನೆಯಲ್ಲಿ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಮಾಜಿ ಸಚಿವರು, ಶಾಸಕರು ಒಬೊಬ್ಬರಾಗಿ ಬರುತ್ತಿದ್ದಾರೆ.

ಬೊಮ್ಮಾಯಿ ಅವರ ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಕುಟುಂಬದ ಸದಸ್ಯರು ಗಾಜಿನ‌ ಮನೆಗೆ ಬಂದಿದ್ದಾರೆ. ರಾಜ್ಯದ ಶಾಸಕರು, ಬಿಜೆಪಿ ಮುಖಂಡರು ರಾಜಭವನದತ್ತ ಬರುತ್ತಿದ್ದಾರೆ.

ADVERTISEMENT

ರಾಜಭವನದ ಹೊರಗಡೆ ಬೊಮ್ಮಾಯಿ ಬೆಂಬಲಿಗರು, ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ‘ಅಬ್‌ ಕೀ ಬಾರ್‌ ಬೊಮ್ಮಾಯಿಕೀ ದರ್ಬಾರ್‌’ ಎಂದು ಘೋಷಣೆ ಕೂಗುತ್ತಿದ್ದಾರೆ.

11 ಗಂಟೆಗೆ ಸರಿಯಾಗಿ ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವರು. ರಾಜ್ಯಪಾಲ ಥಾವರಚಂದ್ ಗೆಹಲೋತ್ ಪ್ರಮಾಣವಚನ ಬೋಧಿಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.