ADVERTISEMENT

ರಾಜ್ಯ ಸರ್ಕಾರದ ವಿರುದ್ಧ ಹೊರಟ್ಟಿ ಅಸಮಾಧಾನ

ಉತ್ತರ ಕರ್ನಾಟಕ ನಿರ್ಲಕ್ಷ್ಯ: ಸಿಎಂ, ಡಿಸಿಎಂಗೆ ಪತ್ರ

​ಪ್ರಜಾವಾಣಿ ವಾರ್ತೆ
Published 15 ಜೂನ್ 2019, 18:30 IST
Last Updated 15 ಜೂನ್ 2019, 18:30 IST
ಬಸವರಾಜ ಹೊರಟ್ಟಿ
ಬಸವರಾಜ ಹೊರಟ್ಟಿ   

ಹುಬ್ಬಳ್ಳಿ: ಅಡ್ವೊಕೇಟ್‌ ಜನರಲ್‌, ವಿಶ್ವವಿದ್ಯಾಲಯಗಳ ಕುಲಪತಿ ಆಯ್ಕೆ ಸೇರಿದಂತೆ ವಿವಿಧ ಹುದ್ದೆಗಳ ಆಯ್ಕೆಯಲ್ಲಿ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಐದು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಹುದ್ದೆಗಳು ಮಂಜೂರಾಗಿವೆ.ಕಲಬುರ್ಗಿ ಹಾಗೂ ಧಾರವಾಡದಲ್ಲಿರುವ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಹುದ್ದೆಗೆ ಮಂಗಳೂರಿನ ಸಂದೇಶ ಚೌಟಾ ಹಾಗೂ ದಿನೇಶ ರಾವ್‌ ಎಂಬುವವರನ್ನು
ನೇಮಿಸಲಾಗಿದೆ. ಆದರೆ, ಅವರಿಗೆ ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ ಎಂದು ದೂರಿದ್ದಾರೆ.

ADVERTISEMENT

ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಸ್ಥಳೀಯ ವಕೀಲರಿಗೆ ಯೋಗ್ಯತೆ ಇದ್ದರೂ ಅನ್ಯಾಯ ಮಾಡಲಾಗುತ್ತಿದೆ. ಇನ್ನೊಂದು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಹುದ್ದೆಗೆ ಧಾರವಾಡದವರನ್ನೇ ನೇಮಿಸಲು ಅಡ್ವೊಕೇಟ್‌ ಜನರಲ್‌ ಶಿಫಾರಸು ಮಾಡಿದ್ದಾರೆ. ಆದರೂ ದಕ್ಷಿಣದವರನ್ನೇ ನೇಮಿಸುವ ಹುನ್ನಾರ ನಡೆದಿದೆ ಎಂದು ಟೀಕಿಸಿದ್ದಾರೆ.

ಅನುದಾನ ಬಿಡುಗಡೆ, ಉನ್ನತ ಅಧಿಕಾರಿಗಳ ನೇಮಕಾತಿ, ಕುಲಪತಿಗಳ ನೇಮಕಾತಿ ಸೇರಿದಂತೆ ಎಲ್ಲ ಪ್ರಮುಖ ಹುದ್ದೆಗಳೂ ದಕ್ಷಿಣ ಕರ್ನಾಟಕದವರ ಪಾಲಾಗುತ್ತಿವೆ. ಬೆಳಗಾವಿಯ ಕಿತ್ತೂರು ಚನ್ನಮ್ಮ ವಿಶ್ವವಿದ್ಯಾಲಯಕ್ಕೂ ದಕ್ಷಿಣದವರನ್ನೇ ನೇಮಕ ಮಾಡಿರುವುದು ಇನ್ನೊಂದು ತಾಜಾ ಉದಾಹರಣೆಯಾಗಿದೆ. ಅರ್ಹರಿದ್ದರೂಈ ಭಾಗದವರಿಗೆ ಅವಕಾಶ ಸಿಗುತ್ತಿಲ್ಲ ಎಂದು ದೂರಿದ್ದಾರೆ.

ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಉತ್ತರ ಕರ್ನಾಟಕದ ಬಗ್ಗೆ ಕಾಳಜಿ ವಹಿಸುತ್ತಾರೆ ಎಂದು ನಾವು ಪದೇ ಪದೇ ವೇದಿಕೆಗಳಲ್ಲಿ ಹೇಳುತ್ತೇವೆ. ಇದನ್ನು ಧೈರ್ಯದಿಂದ ಹೇಳಬೇಕೆಂದರೆಇಂಥ ಅನ್ಯಾಯಗಳನ್ನು ಕೂಡಲೇ ಸರಿಪಡಿಸಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.