ADVERTISEMENT

ಮೀಸಲಾತಿ ಪಾದಯಾತ್ರೆಗಳಿಗೆ ಔಷಧಿ ಇಲ್ಲ: ಹೊರಟ್ಟಿ

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2021, 16:44 IST
Last Updated 12 ಫೆಬ್ರುವರಿ 2021, 16:44 IST
ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದ ಬಸವರಾಜ ಹೊರಟ್ಟಿ
ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದ ಬಸವರಾಜ ಹೊರಟ್ಟಿ   

ತುಮಕೂರು: ’ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮೀಸಲಾತಿ ಪಾದಯಾತ್ರೆಗಳಿಗೆ ಔಷಧಿ ಇಲ್ಲ. ನಾನು ಆ ಬಗ್ಗೆ ಮಾತನಾಡುವುದಿಲ್ಲ. ನಾವು ದೇಶ, ರಾಜ್ಯದ ಬಗ್ಗೆ ಕಾಳಜಿಯಿಂದ ಕೆಲಸ ಮಾಡಲು ಚಿಂತಿಸಬೇಕಿದೆ‘ ಎಂದು ವಿಧಾನ ಪರಿಷತ್ ನೂತನ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಸಿದ್ಧಗಂಗಾ ಮಠಕ್ಕೆ ಶುಕ್ರವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ‘ಪ್ರಸ್ತುತ ದಿನಗಳಲ್ಲಿ ಮೀಸಲಾತಿ ಬಗ್ಗೆ ಮಾತನಾಡುವುದು ಕಷ್ಟದ ಕೆಲಸ. ನಾವು ಜಾತ್ಯತೀತ ರಾಷ್ಟ್ರದಲ್ಲಿದ್ದೇವೆ. ಪ್ರತಿಯೊಬ್ಬರೂ ಚುನಾವಣೆಗೆ ನಿಲ್ಲಬೇಕಾದರೆ ಜಾತಿ ಮುಂದಿಟ್ಟುಕೊಳ್ಳುತ್ತಾರೆ. ಇದು ಒಳ್ಳೆಯದಲ್ಲ‘ ಎಂದರು.

‘2ಎ’ ಮೀಸಲಾತಿಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದ ಪಾದಯಾತ್ರೆ ಬಗ್ಗೆ ಚರ್ಚಿಸುವುದಿಲ್ಲ. ಶ್ರೀಗಳು ನಮ್ಮೆಲ್ಲರಿಗೂ ಮಾರ್ಗದರ್ಶನ ಮಾಡುವಂತಹವರು. ಅವರ ಹೋರಾಟಕ್ಕೆ ದೇವರು ಒಳ್ಳೆಯದು ಮಾಡಲಿ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.