ADVERTISEMENT

ಸಭಾಪತಿ ಚುನಾವಣೆ: ಹೊರಟ್ಟಿ, ನಜೀರ್‌ ನಾಮಪತ್ರ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2021, 17:17 IST
Last Updated 8 ಫೆಬ್ರುವರಿ 2021, 17:17 IST

ಬೆಂಗಳೂರು: ವಿಧಾನ ಪರಿಷತ್‌ ಸಭಾಪತಿ ಚುನಾವಣೆಗೆ ಜೆಡಿಎಸ್‌– ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್‌ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಜೀರ್‌ ಅಹ್ಮದ್‌ ಸೋಮವಾರ ಪರಿಷತ್ ಕಾರ್ಯದರ್ಶಿ ಕೆ.ಆರ್‌. ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಕೆ. ಪ್ರತಾಪಚಂದ್ರ ಶೆಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವ ಸಭಾಪತಿ ಹುದ್ದೆಯ ಭರ್ತಿಗೆ ಮಂಗಳವಾರ ಚುನಾವಣೆ ನಿಗದಿಯಾಗಿದೆ. ಸೋಮವಾರ ಮಧ್ಯಾಹ್ನ 1 ಗಂಟೆಯವರೆಗೂ ನಾಮಪತ್ರ ಸಲ್ಲಿಕೆಗೆ ಅವಕಾಶವಿತ್ತು.

ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಂ.ಟಿ.ಬಿ. ನಾಗರಾಜ್‌, ವಿಧಾನ ಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ, ಬಿಜೆಪಿ ಸದಸ್ಯರಾದ ವೈ.ಎ. ನಾರಾಯಣಸ್ವಾಮಿ, ಭಾರತಿ ಶೆಟ್ಟಿ, ಪ್ರತಾಪಸಿಂಹ ನಾಯಕ್‌, ಜೆಡಿಎಸ್‌ ಸದಸ್ಯರಾದ ಅಪ್ಪಾಜಿಗೌಡ, ಎಚ್‌.ಎಂ. ರಮೇಶ್‌ ಗೌಡ ಅವರು ಹೊರಟ್ಟಿ ಅವರ ನಾಮಪತ್ರ ಸಲ್ಲಿಕೆ ವೇಳೆ ಜತೆಗಿದ್ದರು.

ADVERTISEMENT

ವಿಧಾನ ಪರಿಷತ್‌ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ಆರ್‌. ಪ್ರಸನ್ನಕುಮಾರ್‌, ಅರವಿಂದ ಕುಮಾರ್ ಅರಳಿ, ವಿರೋಧ ಪಕ್ಷದ ಮುಖ್ಯ ಸಚೇತಕ ಎಂ. ನಾರಾಯಣಸ್ವಾಮಿ ಮತ್ತು ಚಾಮರಾಜಪೇಟೆ ಶಾಸಕ ಬಿ.ಜೆಡ್‌, ಜಮೀರ್‌ ಅಹಮ್ಮದ್ ಖಾನ್‌ ಅವರು ನಜೀರ್‌ ಅಹ್ಮದ್‌ ಅವರ ನಾಮಪತ್ರ ಸಲ್ಲಿಕೆ ವೇಳೆ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.