
ಬಸವರಾಜ ರಾಯರಡ್ಡಿ
ಕೊಪ್ಪಳ: ಈ ಸಲದ ಕೇಂದ್ರದ ಬಜೆಟ್‌ನಲ್ಲಿ ದೇಶದ ಭವಿಷ್ಯದ ಬಗ್ಗೆ ಯೋಜನೆಗಳಿಲ್ಲ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರೂ ಆದ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಪ್ರತಿಕ್ರಿಯಿಸಿದ್ದಾರೆ.
‘ನಿರುದ್ಯೋಗ, ಕೃಷಿ, ಶಿಕ್ಷಣ, ನೀರಾವರಿ, ಕ್ಷೇತ್ರಕ್ಕೆ ಹೆಚ್ಚು ಮಹತ್ವ ನೀಡಿಲ್ಲ. ಮೂರು ಏಮ್ಸ್‌ಗಳನ್ನು ಸ್ಥಾಪನೆ ಮಾಡಲಾಗುತ್ತಿದ್ದು, ಅವು ಉತ್ತರ ಭಾರತಕ್ಕೆ ಸೀಮಿತವಾಗಿವೆ. ಕರ್ನಾಟಕದ ರಾಯಚೂರಿಗೆ ಏಮ್ಸ್ ಮಂಜೂರು ಮಾಡಿಲ್ಲ. ಹಿಂದುಳಿದ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಯೋಜನೆ ಹಣ ನೀಡಿಲ್ಲ. ಕರ್ನಾಟಕಕ್ಕೆ ಯಾವುದೇ ಹೊಸ ಯೋಜನೆಗಳನ್ನು ನೀಡಿಲ್ಲ, ಬಜೆಟ್‌ನಲ್ಲಿ ಅನ್ಯಾಯ ಮಾಡಲಾಗಿದೆ’ ಎಂದು ಹೇಳಿದ್ದಾರೆ.
‘ಹೈ ಸ್ಪೀಡ್ ರೈಲ್ ಕಾರಿಡಾರ್ ಬೆಂಗಳೂರು–ಮುಂಬೈಗೆ ಮಾಡಿದ್ದರೆ ವ್ಯಾಪಾರ ಅಭಿವೃದ್ಧಿಗೆ ಅನುಕೂಲವಾಗುತ್ತಿತ್ತು. ಪ್ರತಿವರ್ಷ ಕೇಂದ್ರ ಸರ್ಕಾರ ಸಾಲವನ್ನು ಹೆಚ್ಚು ಪ್ರಮಾಣದಲ್ಲಿ ತೆಗೆದುಕೊಳ್ಳುತ್ತಿದ್ದೆ. 2025 -26ರಲ್ಲಿ ₹15,68,958 ಕೋಟಿ ಸಾಲ ತೆಗೆದುಕೊಂಡಿದೆ. 2026–27ರಲ್ಲಿ ₹1,72,0000 ಕೋಟಿ ಸಾಲ ತೆಗೆದುಕೊಳ್ಳುತ್ತಿದ್ದಾರೆ. ಸಾಲದ ಪ್ರಮಾಣ ದೇಶದ ಜಿಡಿಪಿಗೆ ಶೇ. 56%ರಷ್ಟು ಇದೆ. ಕೇಂದ್ರ ಸರ್ಕಾರ ತಾನೇ ಮಾಡಿದ ಕಾನೂನನ್ನು ಸತತವಾಗಿ ಉಲ್ಲಂಘಿಸುತ್ತಿದೆ. ಸಾಕಷ್ಟು ಪ್ರಮಾಣದಲ್ಲಿ ವಿತ್ತೀಯ ಕೊರತೆ ಹೆಚ್ಚುತ್ತಲೇ ಹೋಗುತ್ತಿದೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.