ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ದುರ್ಬಲರಲ್ಲ: ಬಸವರಾಜ ರಾಯರಡ್ಡಿ

​ಪ್ರಜಾವಾಣಿ ವಾರ್ತೆ
Published 27 ಜೂನ್ 2025, 16:36 IST
Last Updated 27 ಜೂನ್ 2025, 16:36 IST
ಬಸವರಾಜ ರಾಯರಡ್ಡಿ
ಬಸವರಾಜ ರಾಯರಡ್ಡಿ   

ಬೆಂಗಳೂರು: ಯಾರೋ ನಾಲ್ಕು ಜನ ಪದೇ ಪದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದುರ್ಬಲ ಎಂದು ಹೇಳುತ್ತಿರುವ ಕಾರಣ ಅವರು ದುರ್ಬಲರಂತೆ ಬಿಂಬಿತರಾಗಿದ್ದಾರೆ. ವಾಸ್ತವದಲ್ಲಿ ಅವರು ದುರ್ಬಲರಲ್ಲ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು. 

ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಮಾನಸಿಕವಾಗಿ ಗಟ್ಟಿ ಇದ್ದಾರೆ. ದೃಢ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಮುಖ್ಯಮಂತ್ರಿ ಸ್ಥಾನದಲ್ಲಿ ಇರುವವರು ನಿರ್ಭೀತಿಯಿಂದ, ಗಟ್ಟಿ ನಿರ್ಧಾರಗಳನ್ನು ತೆಗೆದುಕೊಂಡಾಗ ಮಾತ್ರ ಸರ್ಕಾರದ ಆಡಳಿತ ಚೆನ್ನಾಗಿರುತ್ತದೆ ಎಂದರು.

ಸಿದ್ದರಾಮಯ್ಯ ಮಾನಸಿಕವಾಗಿ ಎಂದೂ ಕುಗ್ಗಿಲ್ಲ. ಸರ್ಕಾರದ ಆಡಳಿತ ಯಂತ್ರ ಹದಗೆಟ್ಟಿಲ್ಲ. ಕೆಲವರು ಅವರನ್ನು ದುರ್ಬಲರೆಂದು ಬಿಂಬಿಸುವ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.