ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಸ್ಥಾಪಿಸುವ ಪ್ರಸ್ತಾವಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
‘ಪ್ರತಿಮೆಯನ್ನು ಯಾವ ಜಾಗದಲ್ಲಿ ಸ್ಥಾಪಿಸಬೇಕು, ಅದರ ವೆಚ್ಚ ಎಷ್ಟು ಎಂಬುದರ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಧರಿಸಲಿದೆ. ಬಸವಣ್ಣನವರು ವಚನ ಬರೆಯುತ್ತಿರುವ ರೀತಿಯ ಪ್ರತಿಮೆ ಸ್ಥಾಪಿಸುವುದು ಸೂಕ್ತ ಎಂಬ ಅಭಿಪ್ರಾಯ ಸಂಪುಟ ಸಭೆಯಲ್ಲಿ ವ್ಯಕ್ತವಾಯಿತು’ ಎಂದು ಬೊಮ್ಮಾಯಿ ಹೇಳಿದರು. ಚಾಲುಕ್ಯ ವೃತ್ತದಲ್ಲಿ ಬಸವೇಶ್ವರ ಪ್ರತಿಮೆ ಇರುವಾಗ ಮತ್ತೊಂದು ಪ್ರತಿಮೆ ಔಚಿತ್ಯವಿದೆಯೇ ಎಂಬ ಚರ್ಚೆಯೂ ಶುರುವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.