ADVERTISEMENT

ಜಾತಿ– ಧರ್ಮದ ಹೆಸರಿನಲ್ಲಿ ಮತ ಕೇಳುವುದು ಕ್ರಿಮಿನಲ್‌ ಅಪರಾಧ: ಈಶ್ವರಖಂಡ್ರೆ

ಸಿ.ಎಂ. ಹೇಳಿಕೆಗೆ ತಿರುಗೇಟು ನೀಡಿದ ಈಶ್ವರ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2019, 12:06 IST
Last Updated 28 ನವೆಂಬರ್ 2019, 12:06 IST
   

ಗೋಕಾಕ: ‘ವೀರಶೈವ– ಲಿಂಗಾಯತರು ಯಾವುದೇ ಕಾರಣಕ್ಕೂ ಜಾತಿಯ ಹೆಸರಿನಲ್ಲಿ ಮತ ಹಾಕುವುದಿಲ್ಲ. ಜಾತಿ– ಧರ್ಮದ ಹೆಸರಿನಲ್ಲಿ ಮತ ಕೇಳುವುದು ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಅಲ್ಲದೇ, ಕ್ರಿಮಿನಲ್‌ ಅಪರಾಧ ಕೂಡ ಆಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆಗೆ ತಿರುಗೇಟು ನೀಡಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಾತಿ ಧರ್ಮದ ಹೆಸರಿನಲ್ಲಿ ಮತ ಕೇಳುವವರಿಗೆ ಮತದಾರರು ತಕ್ಕ ಪಾಠ ಕಲಿಸಬೇಕು. ಮಹಾರಾಷ್ಟ್ರದಲ್ಲಿ ಅಧಿಕಾರಕ್ಕಾಗಿ ಪಕ್ಷಾಂತರ ಮಾಡಿದ ಎಲ್ಲರೂ ಸೋತಿದ್ದಾರೆ. ಅದೇ ರೀತಿ ಇಲ್ಲಿನ ಉಪಚುನಾವಣೆಯಲ್ಲೂ ಆಗಲಿದೆ. ಮತದಾರರು ಸೂಕ್ತ ನಿರ್ಣಯ ಕೈಗೊಳ್ಳಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಅಧಿಕಾರದ ದಾಹಕ್ಕಾಗಿ ಪಕ್ಷಾಂತರ ಮಾಡಿದ ರಮೇಶ ಅವರು ನೆರೆ ಸಂತ್ರಸ್ತರಿಗೆ ಏನೂ ಸಹಾಯ ಮಾಡಿಲ್ಲ. ಆಗ ಅವರು ಮುಂಬೈನ ಸ್ಟಾರ್‌ ಹೋಟೆಲ್‌ನಲ್ಲಿದ್ದರು. ಇದನ್ನೆಲ್ಲ ಜನರು ಸೂಕ್ಷ್ಮವಾಗಿ ವೀಕ್ಷಿಸಿದ್ದಾರೆ. ತಕ್ಕ ಪಾಠ ಕಲಿಸಲಿದ್ದಾರೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.