ADVERTISEMENT

ಅಂಗನವಾಡಿಗಳಿಗೆ ವಿದ್ಯುತ್‌, ಫ್ಯಾನ್ ಒದಗಿಸಿ; ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 25 ಜೂನ್ 2021, 19:45 IST
Last Updated 25 ಜೂನ್ 2021, 19:45 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ರಾಜ್ಯದ ಅಂಗನವಾಡಿಗಳಿಗೆ ಮೂಲಸೌಕರ್ಯ ಒದಗಿಸಲು ಮಧ್ಯಂತರ ನಿರ್ದೇಶನ ನೀಡಲಾಗುವುದು ಎಂದು ಹೈಕೋರ್ಟ್‌ ತಿಳಿಸಿದೆ.

ಅಪೌಷ್ಟಿಕತೆಗೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಶೇ 50ರಷ್ಟು ಅಂಗನವಾಡಿಗಳಲ್ಲಿ ಮೂಲಸೌಕರ್ಯ ಇಲ್ಲ ಎಂಬುದನ್ನು ಗಮನಿಸಿತು.

‘ರಾಜ್ಯದ 65,911 ಅಂಗನವಾಡಿಗಳಲ್ಲಿ 14,948 ಕೇಂದ್ರಗಳಲ್ಲಿ ವಿದ್ಯುತ್ ಸಂಪರ್ಕ ಇಲ್ಲ. 18,974 ಕೇಂದ್ರಗಳಲ್ಲಿ ಫ್ಯಾನ್‌ಗಳಿಲ್ಲ, 13,690 ಕೇಂದ್ರಗಳಲ್ಲಿ ಶೌಚಾಲಯ ನಿರ್ಮಾಣ ಆಗಬೇಕಿದೆ’ ಎಂದು ನ್ಯಾಯಾಲಯಕ್ಕೆ ರಾಜ್ಯ ಸರ್ಕಾರ ಮಾಹಿತಿ ನೀಡಿತು.

ADVERTISEMENT

‘ಲಭ್ಯ ಇರುವ ಅನುದಾನದಲ್ಲಿ 6,700 ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ, 8,300 ಕೇಂದ್ರಗಳಿಗೆ ಫ್ಯಾನ್‌ಗಳು ಮತ್ತು 3,542 ಅಂಗನವಾಡಿಗಳಲ್ಲಿ ಶೌಚಾಲಯ ನಿರ್ಮಿಸಲಾಗುವುದು’ ಎಂದು ವಿವರಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.