ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಕೆಲವೆಡೆ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಒಂಬತ್ತು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಮಂಡ್ಯ ಜಿಲ್ಲೆಯಲ್ಲಿಯಲ್ಲಿಯೂ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಕಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನಗಳವರೆಗೆ ಕನಿಷ್ಠ ತಾಪಮಾನ ಎರಡು ಡಿಗ್ರಿ ಸೆಲ್ಸಿಯಸ್ ಕುಸಿತವಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.