
ಪ್ರಜಾವಾಣಿ ವಾರ್ತೆ
ಡಿ.ಕೆ. ಶಿವಕುಮಾರ್
ಬೆಂಗಳೂರು: ‘ಲೋಕಸಭೆ ಚುನಾವಣೆ ನಂತರ ಬಿಬಿಎಂಪಿ ಹಾಗೂ ಇತರೆ ಚುನಾವಣೆಗಳು ನಡೆಯಲಿವೆ. ಪಕ್ಷ ಸಂಘಟನೆಯಲ್ಲಿನ ಸಾಮರ್ಥ್ಯ ಪರಿಗಣಿಸಿ ಪಾಲಿಕೆ ಚುನಾವಣೆಯಲ್ಲಿ ಅವಕಾಶ ನೀಡಲಾಗುವುದು’ ಎಂದು ಪಕ್ಷದ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
ಸ್ವಾತಂತ್ರ್ಯ ಉದ್ಯಾನದಲ್ಲಿ ಮಾತನಾಡಿದ ಅವರು, ‘ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಬೆಳಿಗ್ಗೆ 10.30ರ ನಂತರ ಕೆಪಿಸಿಸಿ ಕಚೇರಿ ಹಾಗೂ ಸರ್ಕಾರಿ ಗೃಹಕಚೇರಿ ಬಳಿ ನನ್ನನ್ನು ಬಂದು ಭೇಟಿ ಮಾಡಿ. ನಾವು ಪಕ್ಷದ ಕೆಲಸವನ್ನು ಮಾಡಬೇಕು. ಎಲ್ಲರೂ ಸೇರಿ ಬೆಂಗಳೂರಿನ ನಾಲ್ಕು ಲೋಕಸಭೆ ಕ್ಷೇತ್ರಗಳಲ್ಲಿ ಪಕ್ಷವನ್ನು ಗೆಲ್ಲಿಸಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.