ADVERTISEMENT

ಬಿಬಿಎಂಪಿ ಚುನಾವಣಾ ಸಿದ್ಧತೆ: ಡಿಕೆಶಿ ನಿವಾಸದಲ್ಲಿ ಸಭೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2021, 20:51 IST
Last Updated 16 ಜುಲೈ 2021, 20:51 IST
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನಿವಾಸದಲ್ಲಿ ಶುಕ್ರವಾರ ರಾತ್ರಿ ನಡೆದ ಸಭೆಯಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡ ಎಂ. ವೀರಪ್ಪ ಮೊಯಿಲಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನಿವಾಸದಲ್ಲಿ ಶುಕ್ರವಾರ ರಾತ್ರಿ ನಡೆದ ಸಭೆಯಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡ ಎಂ. ವೀರಪ್ಪ ಮೊಯಿಲಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು   

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಂಬಂಧ ಪಕ್ಷದ ಹಿರಿಯ ನಾಯಕರು, ನಗರದ ಶಾಸಕರು, ಸಂಸದರು, ವಿಧಾನ ಪರಿಷತ್‌ ಸದಸ್ಯರು ಮತ್ತು ವಿಧಾನಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿಗಳ ಜತೆ ಶುಕ್ರವಾರ ರಾತ್ರಿ ತಮ್ಮ ನಿವಾಸದಲ್ಲಿ ಸಭೆ ನಡೆಸಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹಿರಿಯ ಮುಖಂಡ ಎಂ. ವೀರಪ್ಪ ಮೊಯಿಲಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಈಶ್ವರ ಖಂಡ್ರೆ, ಸಲೀಂ ಅಹ್ಮದ್‌, ಸಂಸದ ಡಿ.ಕೆ. ಸುರೇಶ್, ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್‌ ಹಾಗೂ ಕಾಂಗ್ರೆಸ್‌ನ ಎಲ್ಲ ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ವಿಧಾನಸಭೆಯ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಾಗಿದ್ದವರು, ಮಾಜಿ ಮೇಯರ್‌ಗಳೂ ಸಭೆಯಲ್ಲಿ ಭಾಗವಹಿಸಿದ್ದರು.

ಬಿಬಿಎಂಪಿ ಚುನಾವಣೆಯ ವಿಳಂಬವಾಗಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ, ಚುನಾವಣೆಗೆ ಆದೇಶ ಬಂದರೆ ಮಾಡಿಕೊಳ್ಳಬೇಕಾದ ಸಿದ್ಧತೆ, ಪಾಲಿಕೆ ವ್ಯಾಪ್ತಿಯಲ್ಲಿ ಪಕ್ಷ ಸಂಘಟನಾ ಕಾರ್ಯಕ್ರಮಗಳ ಆಯೋಜನೆ ಸೇರಿದಂತೆ ಹಲವು ವಿಷಯಗಳ ಕುರಿತು ಮುಖಂಡರು ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.