ADVERTISEMENT

ಬಿಬಿಎಂಪಿ ಚುನಾವಣೆ: ಆಗಸ್ಟ್‌ 25ಕ್ಕೆ ಕರಡು ಪಟ್ಟಿ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2022, 20:04 IST
Last Updated 20 ಆಗಸ್ಟ್ 2022, 20:04 IST
   

ಬೆಂಗಳೂರು: ಬಿಬಿಎಂಪಿ ಚುನಾವಣೆ ಸಂಬಂಧ ಆಗಸ್ಟ್‌ 25ರಂದು ಮತದಾರರ ಕರಡು ಪಟ್ಟಿ ಪ್ರಕಟವಾಗಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ರಾಜ್ಯ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದರು.

ಆಯೋಗದ ಆಯುಕ್ತ ಬಿ.ಬಸವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈವಿಷಯ ಪ್ರಸ್ತಾಪವಾಯಿತು. ಕರಡು ಪ್ರಕಟಗೊಂಡ ಕೂಡಲೇ ಪಾಲಿಕೆಯ ಅಂತರ್ಜಾಲದಲ್ಲಿ ಪ್ರಕಟಿಸಬೇಕು. ನೋಂದಾಯಿತ ರಾಜಕೀಯ ಪಕ್ಷಗಳ ಕಚೇರಿಗಳು ಹಾಗೂ ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳಿಗೆ ಪ್ರತಿಗಳನ್ನು ನೀಡಬೇಕು ಎಂದು ಅವರು ಸೂಚಿಸಿದರು.

ವಾರ್ಡ್‌ಗಳ ಸಂಖ್ಯೆ 198ರಿಂದ 243ಕ್ಕೆ ಏರಿಕೆ ಆಗಿರುವುದರಿಂದ ಮತಗಟ್ಟೆಗಳ ಪರಿಶೀಲನೆ ಆಗಬೇಕಿದೆ. ವಾರ್ಡ್ ಉಸ್ತುವಾರಿ ಅಧಿಕಾರಿಗಳನ್ನು ಗುರುತಿಸಿ ಪಟ್ಟಿ ಸಿದ್ಧಗೊಳಿಸಬೇಕು ಎಂದು ಪಾಲಿಕೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ADVERTISEMENT

ರಾಜಧಾನಿಯಲ್ಲಿ ಮತದಾನದ ಪ್ರಮಾಣ ಕಡಿಮೆ ಇರುತ್ತದೆ. ಈ ಪ್ರಮಾಣ ಹೆಚ್ಚಿಸಲು ವ್ಯಾಪಕ ಪ್ರಚಾರ ಚಟುವಟಿಕೆ ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು. ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್,ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಹೊನ್ನಾಂಬಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.