ADVERTISEMENT

ಬಿಬಿಎಂಪಿ ಮೇಯರ್ ಚುನಾವಣೆ-ಕಾಂಗ್ರೆಸ್ ಒಪ್ಪಿದರೆ ದೋಸ್ತಿಗೆ ಜೆಡಿಎಸ್ ಸಿದ್ಧ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2019, 11:31 IST
Last Updated 27 ಸೆಪ್ಟೆಂಬರ್ 2019, 11:31 IST
   

ಬೆಂಗಳೂರು: ಬಿಬಿಎಂಪಿ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜೊತೆ ಹಿಂದಿನ ದೋಸ್ತಿ ಮುಂದುವರಿಸುವ ಸಂಬಂಧ ಆ ಪಕ್ಷದ ಮುಖಂಡರ ಜೊತೆ ಮಾತನಾಡಲು ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಸಾರಥ್ಯ ವಹಿಸಲಿದ್ದಾರೆ.

ಬಿಬಿಎಂಪಿ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ನಿವಾಸದಲ್ಲಿ ಶುಕ್ರವಾರ ಬಿಬಿಎಂಪಿ ಕಾರ್ಪೋರೇಟರ್‌ಗಳುಹಾಗೂ ಜೆಡಿಎಸ್ ಶಾಸಕರ ಸಭೆ ನಡೆಸಿದ ನಂತರ ಈ ತೀರ್ಮಾನಕ್ಕೆ ಬರಲಾಗಿದೆ.

ಒಂದು ವೇಳೆ ಕಾಂಗ್ರೆಸ್ ದೋಸ್ತಿಗೆ ಒಪ್ಪಿದರೆ, ದೋಸ್ತಿ ಮೂಲಕ ಚುನಾವಣೆ ಎದುರಿಸಲು ಸಿದ್ಧರಿರುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಸಂಬಂಧ ಮಾತುಕತೆ ನಡೆಸಲು ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಅವರೇ ಸಾರಥ್ಯವಹಿಸಬೇಕೆಂದು ಒಕ್ಕೊರಲಿನಿಂದ ತೀರ್ಮಾನಿಸಲಾಗಿದೆ.

ADVERTISEMENT

ಜೆ.ಪಿ.ನಗರದಲ್ಲಿರುವ ಎಚ್.ಡಿ.ಕುಮಾರಸ್ವಾಮಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ದಾಸರಹಳ್ಳಿಯ ಜೆಡಿಎಸ್ ಶಾಸಕ ಮಂಜುನಾಥ್, ಬೆಂಗಳೂರು ನಗರ ಅಧ್ಯಕ್ಷ ಆರ್ ಪ್ರಕಾಶ ಹಾಗೂ ಉಪಮೇಯರ್ ಭದ್ರೇಗೌಡ ಸೇರಿದಂತೆ ಜೆಡಿಎಸ್ ನ ಎಲ್ಲಾ ಬಿಬಿಎಂಪಿ ಸದಸ್ಯರ ಹಾಜರಿದ್ದರು.ಬಿಬಿಎಂಪಿ ಮೇಯರ್ ಚುನಾವಣೆಗೆ ಹಿಂದಿನ ದೋಸ್ತಿ ಮುಂದುವರಿಸಬೇಕೆ ಅಥವಾ ಬೇಡವೆ, ಮೇಯರ್ ಚುನಾವಣೆಯಲ್ಲಿ ತಮ್ಮ ನಿಲುವು ಏನಾಗಿರಬೇಕು ಎಂಬುದರ ಬಗ್ಗೆ ಸಭೆಯಲ್ಲಿ ಎಚ್ಡಿಕೆ ಚರ್ಚಿಸಿದರು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.