
ಪ್ರಜಾವಾಣಿ ವಾರ್ತೆ
ಬೆಂಗಳೂರು: ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯುವ ಹಿನ್ನೆಲೆಯಲ್ಲಿ ನಗರದಲ್ಲಿನ ಎಲ್ಲಾ ಸೂಪರ್ ಮಾರ್ಕೆಟ್‌ಗಳನ್ನು (ಹವಾನಿಯಂತ್ರಿತ) ಬಂದ್ ಮಾಡಲಾಗುವುದು ಎಂದು ಪಾಲಿಕೆ ಸಾರ್ವಜನಿಕ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ ರಾಜು ತಿಳಿಸಿದರು.
ಈ ಆದೇಶ ಈ ಕ್ಷಣದಿಂದಲೇ ಜಾರಿಗೆ ಬರಲಿದೆ. ಪಾಲಿಕೆ ಆದೇಶ ಉಲ್ಲಂಘಿಸಿದರೆ ಕೆಎಂಸಿ ಕಾಯ್ದೆಯಡಿ ಇರುವ ಅಧಿಕಾರ ಬಳಸಿಕೊಂಡು ಪರವಾನಗಿ ರದ್ದುಗೊಳಿಸಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನೂರಕ್ಕಿಂತ ಹೆಚ್ಚು ಜನ ಸೇರುವ ಮದುವೆ ಆರತಕ್ಷತೆಗಳನ್ನು ರದ್ದುಗೊಳಿಸಲಾಗುವುದು ಎಂದು ಅವರು ಹೇಳಿದರು.
ಶಾಲಾ ಕಾಲೇಜುಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ತಾಲೀಮು, ತರಬೇತಿ ಕಾರ್ಯಕ್ರಮಗಳನ್ನೂ ರದ್ದು ಮಾಡಲು ತಿಳಿಸಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.