ಬೆಂಗಳೂರು: ಕೋವಿಡ್ ಲಸಿಕೆ ನೀಡುವ ಎರಡನೇ ಹಂತದ ಅಭಿಯಾನ ಮಂಗಳವಾರ (ಫೆ.09) ಆರಂಭವಾಗಲಿದೆ. ಕೊರೊನಾ ಸೋಂಕು ಹರಡುವಿಕೆ ನಿಯಂತ್ರಣಕಾರ್ಯದಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಎರಡನೇ ಹಂತದ ಅಭಿಯಾನದಲ್ಲಿ ಲಸಿಕೆ ನೀಡಲಾಗುತ್ತದೆ.
ಬಿಬಿಎಂಪಿ ಆಡಳಿತಾಧಿಕಾರಿ ಗೌರವ ಗುಪ್ತ ಹಾಗೂ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಅವರು ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸ್ವತಃ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಪಾಲಿಕೆಯ ಎಲ್ಲಾ ವಿಶೇಷ ಆಯುಕ್ತರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಲಸಿಕೆ ಹಾಕಿಸಿಕೊಳ್ಳಲಿದ್ದಾರೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.