ADVERTISEMENT

ವಿದ್ಯಾರ್ಥಿಗಳಿಗೆ ಸಿರಿಧಾನ್ಯ ಆಹಾರ: ಕೃಷಿ ಸಚಿವ ಬಿ.ಸಿ. ಪಾಟೀಲ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 3:28 IST
Last Updated 1 ಮಾರ್ಚ್ 2021, 3:28 IST
ನವಲಗುಂದ ತಾಲ್ಲೂಕಿನ ಶಿರಕೋಳ ಗ್ರಾಮದಲ್ಲಿ ಭಾನುವಾರ ಕೃಷಿ ಸಚಿವ ಬಿ.ಸಿ. ಪಾಟೀಲ ಅವರು ರೈತರೊಬ್ಬರ ಜಮೀನಿನಲ್ಲಿ ಟ್ರ್ಯಾಕ್ಟರ್‌ನಿಂದ ಉಳುಮೆ ಮಾಡಿದರು. ಶಾಸಕ ಶಂಕರಪಾಟೀಲ ಮುನೇನಕೊಪ್ಪ ಇದ್ದಾರೆ
ನವಲಗುಂದ ತಾಲ್ಲೂಕಿನ ಶಿರಕೋಳ ಗ್ರಾಮದಲ್ಲಿ ಭಾನುವಾರ ಕೃಷಿ ಸಚಿವ ಬಿ.ಸಿ. ಪಾಟೀಲ ಅವರು ರೈತರೊಬ್ಬರ ಜಮೀನಿನಲ್ಲಿ ಟ್ರ್ಯಾಕ್ಟರ್‌ನಿಂದ ಉಳುಮೆ ಮಾಡಿದರು. ಶಾಸಕ ಶಂಕರಪಾಟೀಲ ಮುನೇನಕೊಪ್ಪ ಇದ್ದಾರೆ   

ಹುಬ್ಬಳ್ಳಿ: ‘ಶಾಲೆಗಳ ಬಿಸಿಯೂಟ ಮತ್ತು ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ಸಿರಿಧಾನ್ಯದ ಆಹಾರ ನೀಡಲು ನಿರ್ಧರಿಸಲಾಗಿದೆ’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ನವಲಗುಂದ ತಾಲ್ಲೂಕಿನ ಬೆಳವಟಗಿಯಲ್ಲಿ ಭಾನುವಾರ ‘ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮದಲ್ಲಿ ಮಾತನಾಡಿ, ‘ಸಿರಿಧಾನ್ಯದ ಆಹಾರವನ್ನು ವಾರಕ್ಕೊಮ್ಮೆ ಮಧ್ಯಾಹ್ನದ ಬಿಸಿಯೂಟಕ್ಕೆ ಮತ್ತು ಹಾಸ್ಟೆಲ್‌ನಲ್ಲಿ ದಿನಕ್ಕೊಮ್ಮೆ ನೀಡಲಾಗುವುದು. ಮೊದಲ ಹಂತದಲ್ಲಿ ಕೃಷಿ ವಿಶ್ವವಿದ್ಯಾಲಯದ ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ಕೊಡಲು ನಿರ್ಧರಿಸಲಾಗಿದೆ. ಇದರಿಂದ ರೈತರಿಗೂ ಉತ್ತೇಜನ ಸಿಕ್ಕಂತಾಗುತ್ತದೆ’ ಎಂದರು.

‘ಕೃಷಿ ಮಿತ್ರ ಯೋಜನೆಯಡಿ ಕೃಷಿ ಡಿಪ್ಲೊಮಾ ವಿದ್ಯಾರ್ಥಿಗಳನ್ನು ನೇಮಕ ಮಾಡಿಕೊಳ್ಳುವ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಜೆಟ್‌ನಲ್ಲಿ ಘೋಷಣೆ ಮಾಡುವ ನಿರೀಕ್ಷೆ ಇದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.