ADVERTISEMENT

ಸೈನಿಕರ ಸಮಾಧಿ ಮೇಲೆ ರಾಜಕೀಯ ಮಾಡುವುದಿಲ್ಲ: ಸಚಿವ ಬಿ.ಸಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2020, 12:55 IST
Last Updated 14 ಫೆಬ್ರುವರಿ 2020, 12:55 IST
ಕೃಷಿ ಸಚಿವ ಬಿ.ಸಿ.ಪಾಟೀಲ ಅವರನ್ನು ಅಭಿಮಾನಿಗಳು ಸಂಭ್ರಮದಿಂದ ಸ್ವಾಗತಿಸಿದರು. –ಪ್ರಜಾವಾಣಿ ಚಿತ್ರ
ಕೃಷಿ ಸಚಿವ ಬಿ.ಸಿ.ಪಾಟೀಲ ಅವರನ್ನು ಅಭಿಮಾನಿಗಳು ಸಂಭ್ರಮದಿಂದ ಸ್ವಾಗತಿಸಿದರು. –ಪ್ರಜಾವಾಣಿ ಚಿತ್ರ    

ಹಾವೇರಿ: ‘ಪುಲ್ವಾಮಾ ಘಟನೆ ಬಗ್ಗೆರಾಹುಲ್‌ಗಾಂಧಿ ಅವರ ಹೇಳಿಕೆ ಬಾಲಿಶವಾದುದು. ವೀರ ಸೈನಿಕರನ್ನು ಬಲಿಕೊಟ್ಟು ರಾಜಕಾರಣ ಮಾಡುವ ಅಗತ್ಯ ಬಿಜೆಪಿಗಿಲ್ಲ‘ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದರು.

ಕೃಷಿ ಸಚಿವನಾದ ನಂತರ ಹಿರೇಕೆರೂರಿಗೆ ಪ್ರಥಮ ಬಾರಿಗೆ ಬರುವ ಮಾರ್ಗ ಮಧ್ಯೆ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ರಾಹುಲ್‌ ಗಾಂಧಿ ಹೇಳಿಕೆಅವರ ಪ್ರಬುದ್ಧತೆ ಎಷ್ಟು ಎಂಬುದನ್ನು ತೋರಿಸುತ್ತದೆ. ಯಾರೂ ಸಾವಿನ ಜೊತೆ ಸರಸವಾಡುವುದಿಲ್ಲ. ಸೈನಿಕರ ಸಮಾಧಿ ಮೇಲೆ ರಾಜಕಾರಣ ಮಾಡುವ ಉದ್ದೇಶ ಯಾರಿಗೂ ಇರುವುದಿಲ್ಲ. ಹಾಗೆ ರಾಹುಲ್‌ ಗಾಂಧಿ ಭಾವಿಸಿದ್ದರೆ, ಅವರ ಮೂರ್ಖತನದ ಪರಮಾವಧಿ ಎಂದು ತಿರುಗೇಟು ನೀಡಿದರು.

17 ಜನರಿಂದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಅವರ ಬಗ್ಗೆ ಮುಖ್ಯಮಂತ್ರಿ ಅವರಿಗೆ ಕಳಕಳಿ ಇದೆ. ಯಾರಿಗೂ ಅನ್ಯಾಯ ಮಾಡುವುದಿಲ್ಲ. ಅವರ ಹಿತರಕ್ಷಿಸುವ ಕೆಲಸವನ್ನು ಬಿ.ಎಸ್‌. ಯಡಿಯೂರಪ್ಪ ಮಾಡಲಿದ್ದಾರೆ ಎಂದರು.

ADVERTISEMENT

ಅತಿವೃಷ್ಟಿ ಪರಿಹಾರ ವಿತರಣೆಯಲ್ಲಿ ಗೋಲ್‌ಮಾಲ್‌ ನಡೆದಿರುವುದನ್ನು ಗಮನಕ್ಕೆ ತಂದರೆ, ಅದನ್ನು ಸರಿಪಡಿಸಲಾಗುವುದು. ರೈತರಿಗೆ ಅನ್ಯಾಯವಾಗಿದ್ದರೆ ಖಂಡಿತ ನ್ಯಾಯ ಒದಗಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.