ADVERTISEMENT

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬಿಡಿಎ ಆಯುಕ್ತ ರಾಜೇಶ್ ಗೌಡ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2022, 12:36 IST
Last Updated 26 ಆಗಸ್ಟ್ 2022, 12:36 IST
   

ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಉಲ್ಲಂಘಿಸಿ ನಿವೇಶನ ಹಂಚಿಕೆ ಮಾಡಿರುವ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ರಾಜೇಶ್ ಗೌಡ ಎಂ.ಬಿ. ಅವರನ್ನು ಬಿಡಿಎ ಆಯುಕ್ತರ ಹುದ್ದೆಯಿಂದ ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಲಾಗಿದೆ.

ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯ್ಕ್ ಜಿ. ಅವರಿಗೆ ಬಿಡಿಎ ಆಯುಕ್ತರ ಹುದ್ದೆಯ ಹೆಚ್ಚುವರಿ ಪ್ರಭಾರ ನೀಡಲಾಗಿದೆ. ರಾಜೇಶ್ ಗೌಡ ಅವರಿಗೆ ಹುದ್ದೆ ತೋರಿಸಿಲ್ಲ.

ADVERTISEMENT

ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಕೆಲವರಿಗೆ ಪರ್ಯಾಯ ನಿವೇಶನ ಹಂಚಿಕೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘಿಸಿದ ಆರೋಪ ರಾಜೇಶ್ ಗೌಡ ಮೇಲಿದೆ. ಅವರನ್ನು ತಕ್ಷಣ ವರ್ಗಾವಣೆ ಮಾಡುವಂತೆ ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.