ಬಿಡಿಎ
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಆವಲಹಳ್ಳಿ ಗ್ರಾಮದಲ್ಲಿ ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸಿ, ₹25 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಆವಲಹಳ್ಳಿ ಗ್ರಾಮದ ಸರ್ವೆ ನಂ. 43/1 ಮತ್ತು 43/8ರಲ್ಲಿನ 16,700 ಚದರಡಿ ಪ್ರದೇಶದಲ್ಲಿ ನಿರ್ಮಾಣವಾಗಿದ್ದ ಶೆಡ್ ಮತ್ತು ಕಾಂಪೌಂಡ್ ಅನ್ನು ಬಿಡಿಎ ಕಾರ್ಯಪಡೆಯ ಸಹಯೋಗದಲ್ಲಿ ಸಿಬ್ಬಂದಿ ತೆರವುಗೊಳಿಸಿದರು ಎಂದು ಕಾರ್ಯಪಾಲಕ ಎಂಜಿನಿಯರ್ ಕೃಷ್ಣಕುಮಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.