ADVERTISEMENT

RSS ಕಾರ್ಯಕ್ರಮವಾಗಲಿ, ನಮಾಜ್ ಆಗಲಿ ಎಲ್ಲರಿಗೂ ಒಂದೇ ನಿಯಮ: ಪ್ರಿಯಾಂಕ್ ಖರ್ಗೆ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2025, 16:02 IST
Last Updated 10 ನವೆಂಬರ್ 2025, 16:02 IST
<div class="paragraphs"><p>ಪ್ರಿಯಾಂಕ್ ಖರ್ಗೆ</p></div>

ಪ್ರಿಯಾಂಕ್ ಖರ್ಗೆ

   

ಬೆಂಗಳೂರು: ‘ಆರ್‌ಎಸ್‌ಎಸ್‌ ಕಾರ್ಯಕ್ರಮವಾಗಲಿ ಅಥವಾ ನಮಾಜ್ ಆಗಲಿ ಸಾರ್ವಜನಿಕವಾಗಿ ನಡೆಸುವುದಾದರೆ ಸರ್ಕಾರದ ಅನುಮತಿ ಅಗತ್ಯ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಕೆಲವರು ಸಾಮೂಹಿಕ ನಮಾಜ್ ಮಾಡಿದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ADVERTISEMENT

‘ವಿಮಾನ ನಿಲ್ದಾಣಗಳಲ್ಲಿ ಪ್ರಾರ್ಥನೆಗೆ ಪ್ರತ್ಯೇಕ ಕೊಠಡಿಗಳಿರುತ್ತವೆ. ಆದರೆ, ಇಲ್ಲಿ ಸಾರ್ವಜನಿಕವಾಗಿ ನಮಾಜ್ ಮಾಡಿದ್ದಾರೆ ಎನ್ನಲಾಗಿದೆ. ಬಿಜೆಪಿಯವರು ಅದಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ’ ಎಂದರು.

‘ದೆಹಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತು ಗುಜರಾತ್‌ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ಗರ್ಬಾ ನೃತ್ಯ ಮಾಡಿರುವುದು ಸರಿ ಎಂದು ಒಪ್ಪಿಕೊಳ್ಳುತ್ತಾರೆಯೇ? ನಮಾಜ್‌ ಸಲ್ಲದು ಎಂದಾದರೆ ಗರ್ಬಾ ನೃತ್ಯ ಕೂಡ ಸಲ್ಲದು’ ಎಂದರು.

‘ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಅನುಮತಿ ಪಡೆಯಬೇಕೆಂಬ ಕಾಂಗ್ರೆಸ್ ಸರ್ಕಾರದ ಆದೇಶಕ್ಕೆ ಬಿಜೆಪಿ ತಡೆ ತಂದಿರುವುದು ಯಾಕೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

‘ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬುದು ನಮ್ಮ ಸರ್ಕಾರದ ನಿಲುವು. ಬೆಂಗಳೂರಿನಲ್ಲಿ ಪ್ರತಿಭಟನೆಗಳಿಗೆ ಸ್ವಾತಂತ್ರ್ಯ ಉದ್ಯಾನವನ್ನು ನಿಗದಿಪಡಿಸಲಾಗಿದೆ. ಅದಕ್ಕೆ ಅನುಮತಿ ಪಡೆಯಬೇಕು. ನಾವು ಕೂಡ ಮತ ಕಳವು ಅಭಿಯಾನ ನಡೆಸಿದಾಗ ಅನುಮತಿ ಪಡೆದೇ ಮಾಡಿದ್ದೇವೆ. ಇಡೀ ರಾಜ್ಯಕ್ಕೆ ಈ ನಿಯಮವನ್ನು ವಿಸ್ತರಿಸಿದಾಗ ಬಿಜೆಪಿ, ತನ್ನ ಅಂಗ ಸಂಸ್ಥೆಗಳ ಮೂಲಕ ಧಾರವಾಡದಲ್ಲಿ ಮಧ್ಯಂತರ ತಡೆ ತಂದಿದ್ದೇಕೆ’ ಎಂದು ಅವರು ಕೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.