ADVERTISEMENT

ಪ್ರವಾಹ: ಪರಿಹಾರ ಸಾಮಗ್ರಿ ಉಚಿತ ಸಾಗಣೆಗೆ ಕೆಎಸ್‌ಆರ್‌ಟಿಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2019, 12:19 IST
Last Updated 8 ಆಗಸ್ಟ್ 2019, 12:19 IST
   

ಬೆಂಗಳೂರು:ಉತ್ತರ ಕರ್ನಾಟಕ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯದಲ್ಲಿ ಕೈಜೋಡಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಎಸ್‌ಆರ್‌ಟಿಸಿ) ಮುಂದಾಗಿದೆ.

ನಿಗಮದ ದೈನಂದಿನ ಸಾರಿಗೆಗಳಲ್ಲಿ ಪರಿಹಾರ ಸಾಮಗ್ರಿಗಳನ್ನು ಉಚಿತವಾಗಿ ಸಾಗಿಸಲು ಅನುವು ಮಾಡಿಕೊಡುವಂತೆ ಎಲ್ಲ ಘಟಕಗಳಿಗೆ ಸೂಚಿಸಲಾಗಿದೆ. ತುರ್ತು ಕಾರ್ಯಗಳಿಗಾಗಿ 2 ವಾಹನ, ಇಬ್ಬರು ನಿರ್ವಾಹಕರು ಮತ್ತು ಚಾಲಕರನ್ನು ನಿಯೋಜಿಸುವಂತೆ ನಿರ್ದೇಶಿಸಲಾಗಿದೆ.

ಜಿಲ್ಲಾಡಳಿತದಿಂದ ಕೋರಿಕೆ ಬಂದಲ್ಲಿ ತುರ್ತಾಗಿ ವಾಹನ ಕಳುಹಿಸುವುದು, ಮಾರ್ಗ ಮಧ್ಯೆ ಸಿಲುಕಿಕೊಂಡ ಬಸ್‌ಗಳಿಂದ ಪ್ರಯಾಣಿಕರನ್ನು ಸುರಕ್ಷಿತ ಪ್ರದೇಶಗಳಿಗೆ ಕರೆದೊಯ್ಯುವುದು, ಮುಂಗಡ ಕಾಯ್ದಿರಿಸಿದ ಪ್ರಯಾಣಿಕರು ಅನಿವಾರ್ಯ ಕಾರಣಗಳಿಂದ ಕೊನೇಕ್ಷಣದಲ್ಲಿ ಪ್ರಯಾಣ ರದ್ದು ಮಾಡಬೇಕಾಗಿ ಬಂದಲ್ಲಿ ಪೂರ್ತಿ ಮೊತ್ತ ಮರಳಿಸಲು ಕ್ರಮ ಕೈಗೊಳ್ಳುವಂತೆಯೂ ಘಟಕಗಳಿಗೆ ಕಳುಹಿಸಿದ ಸುತ್ತೋಲೆಯಲ್ಲಿಕೆಎಎಸ್‌ಆರ್‌ಟಿಸಿ ಸೂಚಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.