ADVERTISEMENT

ಕರಡಿ ದಾಳಿ: ಗಾಯಾಳು ಆರೋಗ್ಯ ವಿಚಾರಿಸಿದ ಡಾ.ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2018, 5:53 IST
Last Updated 6 ಡಿಸೆಂಬರ್ 2018, 5:53 IST
ಗಾಯಾಳು ಮಹಿಳೆಯೊಂದಿಗೆ ಡಾ. ಜಿ.ಪರಮೇಶ್ವರ ಮಾತನಾಡುತ್ತಿರುವುದು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಚಂದ್ರಿಕಾ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಇದ್ದರು
ಗಾಯಾಳು ಮಹಿಳೆಯೊಂದಿಗೆ ಡಾ. ಜಿ.ಪರಮೇಶ್ವರ ಮಾತನಾಡುತ್ತಿರುವುದು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಚಂದ್ರಿಕಾ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಇದ್ದರು   

ತುಮಕೂರು: ಕೊರಟಗೆರೆ ತಾಲ್ಲೂಕು ತೋವಿನಕೆರೆ ಸಮೀಪ ಈಚೆಗೆ ಕರಡಿ ದಾಳಿಯಿಂದ ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ಗಾಯಾಳುಗಳ ಆರೋಗ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಪರಮೇಶ್ವರ ಗುರುವಾರ ವಿಚಾರಿಸಿದರು.

ಗಾಯಾಳುಗಳಿಗೆ ಚಿಕಿತ್ಸೆ ಮತ್ತು ಆರೈಕೆಗೆ ಸಂಬಂಧಿಸಿದಂತೆ ಹೆಚ್ಚಿನ ನಿಗಾವಹಿಸಲು ವೈದ್ಯರಿಗೆ ಸೂಚಿಸಿದರು.

ಗಾಯಾಳುಗಳಿಗೆ ಅರಣ್ಯ ಇಲಾಖೆಯ ವತಿಯಿಂದ ತಲಾ ₹ 20 ಸಾವಿರ ಪರಿಹಾರ ವಿತರಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.