ADVERTISEMENT

ಬಿ.ಇಡಿ ಪ್ರವೇಶಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2025, 15:37 IST
Last Updated 4 ಅಕ್ಟೋಬರ್ 2025, 15:37 IST
   

ಬೆಂಗಳೂರು: ಎರಡು ವರ್ಷಗಳ ಬಿ.ಇಡಿ ಕೋರ್ಸ್‌ನ 2025–26ನೇ ಸಾಲಿನ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಕ್ಕೆ ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕ ಅರ್ಜಿ ಆಹ್ವಾನಿಸಿದೆ.

ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಷಯದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ಅ.4ರಿಂದ ನ.3ರವರೆಗೆ ಇಲಾಖಾ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ https://schooleducation.karnataka.gov.in ಸಂಪರ್ಕಿಸಬಹುದು ಎಂದು ಘಟಕದ ಜಂಟಿ ನಿರ್ದೇಶಕರು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.