ನರೇಂದ್ರ ಮೋದಿ
(ರಾಯಿಟರ್ಸ್ ಚಿತ್ರ)
ನವದೆಹಲಿ: ಬೆಳಗಾವಿ ಬಾರ್ ಅಸೋಸಿಯೇಷನ್‌ನ 150ನೇ ವಾರ್ಷಿಕೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಸದ ಜಗದೀಶ ಶೆಟ್ಟರ್ ಸೋಮವಾರ ಆಹ್ವಾನ ನೀಡಿದರು.
ಸಂಸತ್ ಭವನದಲ್ಲಿ ಪ್ರಧಾನಿ ಅವರನ್ನು ಭೇಟಿ ಮಾಡಿದ ಶೆಟ್ಟರ್, ‘ಅಕ್ಟೋಬರ್ 4ರಂದು ನಡೆಯಲಿರುವ ವಾರ್ಷಿಕೋತ್ಸವದಲ್ಲಿ 20 ಸಾವಿರ ವಕೀಲರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಬೇಕುʼ ಎಂದು ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.