
ಸುವರ್ಣ ವಿಧಾನಸೌಧ (ಬೆಳಗಾವಿ): ‘ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಲ್ಲ. ಅದು ಸ್ವಾತಂತ್ರ್ಯ ಹೋರಾಟದ ಪ್ರತೀಕ, ಭಾರತದ ಹೆಮ್ಮೆ, ಸ್ವಾಭಿಮಾನದ ಸಂಕೇತ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿ ಇರುವ ಮೆಟ್ಟಿಲುಗಳ ಮೇಲೆ ಜಗತ್ತಿನಲ್ಲಿಯೇ ಎರಡನೇ ಅತಿ ದೊಡ್ಡದಾದ ತ್ರಿವರ್ಣ ಧ್ವಜವನ್ನು ಮಂಗಳವಾರ ಅನಾವರಣ ಮಾಡಿ ಅವರು ಮಾತನಾಡಿದರು. ‘ನಮ್ಮ ತ್ರಿವರ್ಣ ಧ್ವಜದಲ್ಲಿರುವ ಕೇಸರಿ, ಬಿಳಿ, ಹಸಿರು ಬಣ್ಣಗಳು ಶೌರ್ಯ, ಸ್ವಾಭಿಮಾನ, ಶಾಂತಿ, ಸಮೃದ್ಧಿಯನ್ನು ಪ್ರತಿಬಿಂಬಿಸುತ್ತವೆ. ರಾಷ್ಟ್ರ ಧ್ವಜವನ್ನು ಪ್ರತಿಯೊಬ್ಬರೂ ಗೌರವಿಸಬೇಕು’ ಎಂದು ಹೇಳಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ಸುವರ್ಣ ವಿಧಾನಸೌಧದ ಮಟ್ಟಿಲುಗಳ ಮೇಲೆ ಬೃಹತ್ ತ್ರಿವರ್ಣ ಧ್ವಜವನ್ನು ಅನಾವರಣ ಮಾಡಿರುವುದು, ದೇಶ ಪ್ರೇಮವನ್ನು ಮುಂದಿನ ಪೀಳಿಗೆಗೆ ದಾಟಿಸುವ ಕ್ರಮವಾಗಿದೆ’ ಎಂದರು.
ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ವಿಧಾನ ಪರಿಷತ್ತಿನಲ್ಲಿ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.