ADVERTISEMENT

ಗಡಿ ವಿವಾದ | ವ್ಯಾಜ್ಯಕ್ಕೆ ಮಹಾರಾಷ್ಟ್ರ ಪ್ರಚೋದನೆ ನೀಡಬಾರದು: ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2022, 7:46 IST
Last Updated 22 ನವೆಂಬರ್ 2022, 7:46 IST
ಬಸವರಾಜ ಬೊಮ್ಮಾಯಿ (ಕಡತ ಚಿತ್ರ)
ಬಸವರಾಜ ಬೊಮ್ಮಾಯಿ (ಕಡತ ಚಿತ್ರ)   

ಬೆಂಗಳೂರು: ರಾಜ್ಯ ರಾಜ್ಯಗಳ ನಡುವೆ ವ್ಯಾಜ್ಯಕ್ಕೆ ಪ್ರಚೋದನೆ ನೀಡುವ ಕೆಲಸವನ್ನು ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕರ್ನಾಟಕ- ಮಹಾರಾಷ್ಟ್ರ ರಾಜ್ಯಗಳ ಗಡಿ ವಿವಾದ ಕುರಿತು ಬುಧವಾರ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುವ ಬಗ್ಗೆ ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು,' ಗಡಿ ಅಭಿವೃದ್ಧಿ ಪ್ರಾಧಿಕಾರವು ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕೆನ್ನುವ ತೀರ್ಮಾನ ಮಾಡಲಾಗಿದೆ. ಏಕೀಕರಣ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಹಾಗೂ ಗೋವಾ ವಿಮೋಚನೆಗೆ ಕೆಲಸ ಮಾಡಿದ ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ದಾಖಲೆಗಳನ್ನು ತರಿಸಿ ಅವರಿಗೂ ಪಿಂಚಣಿ ನೀಡುವ ಕೆಲಸವನ್ನು ಕಾರ್ಯಗತ ಮಾಡಲಾಗುವುದು' ಎಂದರು.

'ಎರಡು ರಾಜ್ಯಗಳ ನಡುವೆ ಸೌಹಾರ್ದ ವಾತಾವರಣ ಇರುವಾಗ, ಎಲ್ಲಾ ಭಾಷಿಕರನ್ನು ಒಂದೇ ರೀತಿಯಲ್ಲಿ ನೋಡಿಕೊಳ್ಳುವಾಗ, ಮಹಾರಾಷ್ಟ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಇರುವ ಕನ್ನಡಿಗರ ಹಿತರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಅದನ್ನು ನಾವು ಮಾಡುತ್ತೇವೆ' ಎಂದರು.

ADVERTISEMENT

ಮಹಾರಾಷ್ಟ್ರದ ಜತ್ ತಾಲ್ಲೂಕಿನಲ್ಲಿ ತೀವ್ರ ಬರಗಾಲವಿದ್ದು ಕುಡಿಯುವ ನೀರಿನ ಸಮಸ್ಯೆ ಇತ್ತು. ನಾವು ನೀರು ಕೊಟ್ಟು ಸಹಾಯ ಮಾಡಬೇಕೆಂದು ಯೋಜನೆಗಳನ್ನು ರೂಪಿಸಿದ್ದೇವೆ. ಜತ್ ತಾಲ್ಲೂಕು ಕರ್ನಾಟಕಕ್ಕೆ ಸೇರಬೇಕೆಂದು ಅಲ್ಲಿನ ಎಲ್ಲಾ ಗ್ರಾಮ ಪಂಚಾಯಿತಿಗಳು ನಿರ್ಧರಿಸಿದ್ದವು. ನಾವು ಅದನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.