ADVERTISEMENT

ಬೆಳಗಾವಿ, ಚಾಮರಾಜನಗರ ಜಿಲ್ಲಾಧಿಕಾರಿಗಳ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2021, 16:48 IST
Last Updated 15 ನವೆಂಬರ್ 2021, 16:48 IST

ಬೆಂಗಳೂರು: ವಿಧಾನ ಪರಿಷತ್‌ನ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿರುವ ಕಾರಣದಿಂದ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮತ್ತು ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್‌. ರವಿ ಅವರನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಲಾಗಿದೆ.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಆರ್‌. ವೆಂಕಟೇಶ್‌ ಕುಮಾರ್‌ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ಮತ್ತು ಹುದ್ದೆ ನಿರೀಕ್ಷೆಯಲ್ಲಿದ್ದ ಐಎಎಸ್‌ ಅಧಿಕಾರಿ ಚಾರುಲತಾ ಸೋಮಲ್‌ ಅವರನ್ನು ಚಾಮರಾಜನಗರ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಎಂ.ಜಿ. ಹಿರೇಮಠ ಮತ್ತು ರವಿ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ.

ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ ಜಿ. ಜಗದೀಶ ಅವರಿಗೆ ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (ಬಿಎಂಆರ್‌ಡಿಎ) ಆಯುಕ್ತರ ಹುದ್ದೆಯ ಹೆಚ್ಚುವರಿ ಪ್ರಭಾರ ವಹಿಸಿ ಆದೇಶ ಹೊರಡಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.