ಬೆಂಗಳೂರು: ಬೆಳಗಾವಿ ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಜತೆಗೆ, 12 ಐಎಎಸ್ ಅಧಿಕಾರಿಗಳನ್ನು ವರ್ಗ ಮಾಡಲಾಗಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜಾರಕಿಹೊಳಿ ಸಹೋದರರನ್ನು ಮಂಗಳವಾರ ಕರೆಸಿ ಸಂಧಾನ ನಡೆಸಿದ್ದರು. ‘ಸರ್ಕಾರದ ಕಡೆಯಿಂದ ಏನು ಆಗಬೇಕೋ ಎಲ್ಲವನ್ನೂ ಮಾಡಿಕೊಡುವೆ’ ಎಂದು ಭರವಸೆ ನೀಡಿದ್ದರು. ಅದರ ಬೆನ್ನಲ್ಲೇ, ಜಿಲ್ಲಾಧಿಕಾರಿಯ ವರ್ಗಾವಣೆ ಆಗಿದೆ. ಜಿಯಾವುಲ್ಲಾ ಅವರಿಗೆ ಸ್ಥಾನ ತೋರಿಸಿಲ್ಲ. ಅವರ ಜಾಗಕ್ಕೆ ಕೃಷ್ಣಾ ಮೇಲ್ದಂಡೆ ಯೋಜನೆಯ ಮುಖ್ಯ ವ್ಯವಸ್ಥಾಪಕ ಎಸ್.ಬಿ.ಬೊಮ್ಮನಹಳ್ಳಿ ಅವರನ್ನು ನೇಮಕ ಮಾಡಲಾಗಿದೆ.
ತನುಶ್ರೀ ದೇವ್ ವರ್ಮ–ಬಿಎಂಟಿಸಿಯ ನಿರ್ದೇಶಕಿ (ಮಾಹಿತಿ ತಂತ್ರಜ್ಞಾನ). ಆರ್.ಗಿರೀಶ್– ಜಿಲ್ಲಾಧಿಕಾರಿ, ಚಿತ್ರದುರ್ಗ. ಡಾ.ಬಿ.ಸಿ.ಸತೀಶ– ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯಿತಿ,ಧಾರವಾಡ.
ಡಾ.ಎಂ.ಆರ್.ರವಿ– ಆಯುಕ್ತ, ಜವಳಿ ಇಲಾಖೆ. ಕವಿತಾ ಎಸ್.ಮನ್ನಿಕೇರಿ–ಮುಖ್ಯಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯಿತಿ, ಯಾದಗಿರಿ. ಮಹಾಂತೇಶ ಬೀಳಗಿ–ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯಿತಿ, ಬೀದರ್. ಕೆ.ಶಿವರಾಮೇಗೌಡ–ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯಿತಿ, ಶಿವಮೊಗ್ಗ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.