ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನ ನಿಗದಿತ ದಿನಾಂಕಕ್ಕಿಂತ ಒಂದು ದಿನ ಮೊದಲೇ ಮುಕ್ತಾಯ
ವಾಗಲಿದೆ.
ವಿಧಾನಸಭೆಯಲ್ಲಿ ಈ ವಿಷಯ ತಿಳಿಸಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಕಲಾಪವು ಇದೇ 30ರವರೆಗೆ ನಡೆಯಬೇಕಿತ್ತು. ಆದರೆ, ಸದನದ ಅನೇಕ ಸದಸ್ಯರು ಅನ್ಯ ಕಾರ್ಯನಿಮಿತ್ತ ಅಂದು ಇರಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ, ಗುರುವಾರ (ಡಿ.29) ಸಂಜೆಯೇ ಕಲಾಪ ಮುಕ್ತಾಯಗೊಳಿಸುವ ಬಗ್ಗೆ ಹಿರಿಯ ಸದಸ್ಯರ ಜತೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗಿದೆ’ ಎಂದರು.
ಮಧ್ಯ ಪ್ರವೇಶಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಉತ್ತರ ಕರ್ನಾಟಕದ ಬಗ್ಗೆ ಚರ್ಚೆಯಾಗಬೇಕಿದೆ. ಹೀಗಾಗಿ, ಶುಕ್ರವಾರ ಮಧ್ಯಾಹ್ನದವರೆಗೆ ಸುಮಾರು 3 ಗಂಟೆ ಕಲಾಪ ನಡೆಯುತ್ತಿತ್ತು. ಗುರುವಾರವೇ ಸಮಯ ಹೊಂದಿಸಿಕೊಂಡು, ಭೋಜನ ವಿರಾಮವೂ ಇಲ್ಲದಂತೆ ನಡೆಸಿ. ಕೊನೆಯ ದಿನದ ಮೂರು ಗಂಟೆಯ ಕಲಾಪ ನಷ್ಟವಾಗದಂತೆ ನೋಡಿಕೊಳ್ಳಿ’ ಎಂದು ಸಲಹೆ ನೀಡಿದರು.
ಅದನ್ನು ಕಾಗೇರಿ ಒಪ್ಪಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.