ADVERTISEMENT

ಎಂಇಎಸ್‌ ನಿಷೇಧಕ್ಕೆ ಆಗ್ರಹಿಸಿ ಹೊಸಪೇಟೆಯಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2022, 9:12 IST
Last Updated 8 ಡಿಸೆಂಬರ್ 2022, 9:12 IST
 ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಪರ ಸಂಘಟನೆಗಳ ಒಕ್ಕೂಟ) ಜಿಲ್ಲಾ ಸಮಿತಿಯ ಕಾರ್ಯಕರ್ತರ ಪ್ರತಿಭಟನೆ
ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಪರ ಸಂಘಟನೆಗಳ ಒಕ್ಕೂಟ) ಜಿಲ್ಲಾ ಸಮಿತಿಯ ಕಾರ್ಯಕರ್ತರ ಪ್ರತಿಭಟನೆ    

ಹೊಸಪೇಟೆ (ವಿಜಯನಗರ): ಬೆಳಗಾವಿ ಗಡಿ ವಿವಾದವನ್ನು ಕೆದಕಿ ಸಂಘರ್ಷಮಯ ವಾತಾವರಣ ಸೃಷ್ಟಿಸಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು (ಎಂಇಎಸ್‌) ನಿಷೇಧಿಸಿ, ಆ ಸಂಘಟನೆಯ ಮುಖಂಡರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಪರ ಸಂಘಟನೆಗಳ ಒಕ್ಕೂಟ) ಜಿಲ್ಲಾ ಸಮಿತಿಯ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಡಾ. ಪುನೀತ್‌ ರಾಜಕುಮಾರ್‌ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಎಂಇಎಸ್‌ ವಿರುದ್ಧ ಘೋಷಣೆಗಳನ್ನು ಕೂಗಿದರು. ಕನ್ನಡಕ್ಕೆ ಜಯವಾಗಲಿ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಕನ್ನಡಿಗರ ಆಸ್ತಿ ಮೇಲೆ ದಾಳಿ ನಡೆಸಲಾಗುತ್ತಿದೆ. ಕನ್ನಡಿಗರ ಸಂಸ್ಥೆಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ. ಎಂಇಎಸ್‌, ಶಿವಸೇನೆ, ಎನ್‌ಸಿಪಿ, ಎಂಎನ್‌ಎಸ್‌ ಪಕ್ಷಗಳು ಇದರಲ್ಲಿ ಶಾಮಿಲಾಗಿದ್ದು, ಅವರ ವಿರುದ್ಧ ಕ್ರಮ ಜರುಗಿಸಬೇಕು. ಕನ್ನಡಿಗರು, ಅವರ ಆಸ್ತಿ ರಕ್ಷಿಸಬೇಕೆಂದು ಹಕ್ಕೊತ್ತಾಯ ಮಾಡಿದರು.
ಜಿಲ್ಲಾಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ, ಸೈಯದ್‌ ಜಾಫರ್‌, ರಾಮಕೃಷ್ಣ ಇತರರು ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.