ADVERTISEMENT

ಅಧಿವೇಶನ | ವಿಧಾನಸಭೆ ಪ್ರಶ್ನೋತ್ತರ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2025, 0:50 IST
Last Updated 12 ಡಿಸೆಂಬರ್ 2025, 0:50 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಳಗಾವಿಯ ಸುವರ್ಣ ವಿಧಾನಸಭೆಯಲ್ಲಿ ನಡೆಯತ್ತಿರುವ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ನಡೆದ ಪ್ರಶ್ನೋತ್ತರಗಳು ಇಲ್ಲಿವೆ.

‘₹ 50 ಕೋಟಿ ಅನುದಾನ’

ರಾಜ್ಯದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಪರಿಷ್ಕೃತ ಪಠ್ಯಕ್ರಮದ ಅನುಸಾರ ಯಂತ್ರೋಪಕರಣಗಳನ್ನು ಖರೀದಿಸಿ ಒದಗಿಸಲು ₹ 50 ಕೋಟಿ ಅನುದಾನ ಒದಗಿಸಲಾಗಿದ್ದು, ಈಗಾಗಲೆ ಟೆಂಡರ್ ಪ್ರಕ್ರಿಯೆ ನಡೆದಿದೆ.

ADVERTISEMENT

ಉದ್ಯಮಶೀಲತೆ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ಕೌಶಲಾಭಿವೃದ್ಧಿ, (ಪ್ರಶ್ನೆ: ಬಿಜೆಪಿಯ ಬಿ.ಎಂ. ನಾಗರಾಜ್)

‘ಆಹಾರಧಾನ್ಯ ಹಂಚಿಕೆಗೆ ಕ್ರಮ’

ಸಣ್ಣ ಸಣ್ಣ ಗ್ರಾಮದ ಪಡಿತರ ಚೀಟಿದಾರರಿಗೆ ತೊಂದರೆಯಾಗದಂತೆ ನ್ಯಾಯಬೆಲೆ ಅಂಗಡಿ ವರ್ತಕರಿಗೆ ಗ್ರಾಮಗಳಲ್ಲಿ ಉಪ ಕೇಂದ್ರಗಳನ್ನು ತೆರೆದು ಆಹಾರಧಾನ್ಯ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಪಡಿತರ ಚೀಟಿಗಳ ಸಂಖ್ಯೆಗೆ ಅನುಗುಣವಾಗಿ ಅಗತ್ಯ ಇದ್ದ ಕಡೆ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲಾಗುವುದು

ಆಹಾರ ಸಚಿವ ಕೆ.ಎಚ್. ಮುನಿಯಪ್ಪ, (ಪ್ರಶ್ನೆ: ಜೆಡಿಎಸ್‌ನ ಶರಣಗೌಡ ಕಂದಕೂರ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.