ADVERTISEMENT

ವೈದ್ಯಕೀಯ: ಗ್ರಾಮೀಣ ಸೇವೆ ಕಡ್ಡಾಯ ರದ್ದು- ಮಸೂದೆಗೆ ವಿಧಾನ ಪರಿಷತ್‌ ಅಂಗೀಕಾರ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2023, 14:31 IST
Last Updated 13 ಡಿಸೆಂಬರ್ 2023, 14:31 IST
<div class="paragraphs"><p>ಬೆಳಗಾವಿ ಅಧಿವೇಶನ (ಪ್ರಾತಿನಿಧಿಕ ಚಿತ್ರ)</p></div>

ಬೆಳಗಾವಿ ಅಧಿವೇಶನ (ಪ್ರಾತಿನಿಧಿಕ ಚಿತ್ರ)

   

ವಿಧಾನ ಪರಿಷತ್‌: ರಾಜ್ಯದಲ್ಲಿ ಎಂಬಿಬಿಎಸ್‌ ಮತ್ತು ಸ್ನಾತಕೋತ್ತರ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಗ್ರಾಮೀಣ ಮತ್ತು ನಗರ ಪ್ರದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ವರ್ಷ ಕಡ್ಡಾಯವಾಗಿ ಸೇವೆ ಸಲ್ಲಿಸಬೇಕು ಎಂಬ ನಿಯಮ ರದ್ದು ಮಾಡಲು ಅವಕಾಶ ಕಲ್ಪಿಸುವ ‘ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತರಬೇತಿ (ತಿದ್ದುಪಡಿ) ಮಸೂದೆ –2023’ಗೆ ಅಂಗೀಕಾರಗೊಂಡಿತು.

ಮಸೂದೆ ಮಂಡಿಸಿ ವಿವರಣೆ ನೀಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ‘ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮಿತಿಗೊಳಿಸಿ ಅಭ್ಯರ್ಥಿಗಳು ಸರ್ಕಾರಿ ಸೇವೆಗೆ ನೇಮಿಸಲು ಈ ತಿದ್ದುಪಡಿಯಿಂದ ಅವಕಾಶ ಆಗಲಿದೆ. ಇದರ ಹಿಂದೆ ಯಾವುದೇ ದುರುದ್ದೇಶ ಇಲ್ಲ. ಹಣ ಉಳಿಸುವ ಉದ್ದೇಶವೂ ಇಲ್ಲ’ ಎಂದರು.

ADVERTISEMENT

ಬಿಜೆಪಿಯ ವೈ.ಎ. ನಾರಾಯಣ ಸ್ವಾಮಿ, ಎನ್‌. ರವಿಕುಮಾರ್‌, ಪಿ.ಎಚ್. ಪೂಜಾರ್‌, ‘ಈ ತಿದ್ದುಪಡಿ ಮೂಲ ಕಾಯ್ದೆಯನ್ನು ದುರ್ಬಲಗೊಳಿಸಲಿದೆ. ಹೀಗಾಗಿ, ತಿದ್ದುಪಡಿ ಮಸೂದೆಯನ್ನು ವಾಪಸ್‌ ಪಡೆಯಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.