ADVERTISEMENT

ವಿಧಾನಪರಿಷತ್‌ ಉಪ ಸಭಾಪತಿಯಾಗಿ ಎಂ.ಕೆ. ಪ್ರಾಣೇಶ್ ಆಯ್ಕೆ 

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಡಿಸೆಂಬರ್ 2022, 6:52 IST
Last Updated 23 ಡಿಸೆಂಬರ್ 2022, 6:52 IST
ಬೆಳಗಾವಿ ಸುವರ್ಣಸೌಧ
ಬೆಳಗಾವಿ ಸುವರ್ಣಸೌಧ   

ಬೆಂಗಳೂರು: ವಿಧಾನಪರಿಷತ್‌ ಉಪ ಸಭಾಪತಿಯಾಗಿ ಬಿಜೆಪಿ ಸದಸ್ಯ ಎಂ.ಕೆ. ಪ್ರಾಣೇಶ್ಆಯ್ಕೆಯಾಗಿದ್ದಾರೆ.

ಶುಕ್ರವಾರ ನಡೆದ ಉಪ ಸಭಾಪತಿ ಚುನಾವಣೆ ಎಂ.ಕೆ. ಪ್ರಾಣೇಶ್ 39 ಮತಗಳನ್ನು ಪಡೆದಿದ್ದಾರೆ.

ಕಾಂಗ್ರೆಸ್ ಸದಸ್ಯ ಅರವಿಂದ ಅರಳಿ 26 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್‌ ಸದಸ್ಯರು ಮತಚಲಾಯಿಸದೆ ತಟಸ್ಥರಾಗಿದ್ದರು.

ಎಂ.ಕೆ. ಪ್ರಾಣೇಶ್ ಮತ್ತು ಅರವಿಂದ ಅರಳಿ ಅವರು ಪರಿಷತ್‌ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ ಅವರಿಗೆ ಗುರುವಾರ ನಾಮಪತ್ರ ಸಲ್ಲಿಸಿದ್ದರು. ಸದನದಲ್ಲಿ ಬಿಜೆಪಿ 39, ಕಾಂಗ್ರೆಸ್‌ 26, ಜೆಡಿಎಸ್‌ 8 ಹಾಗೂ ಒಬ್ಬರು ಪಕ್ಷೇತರ ಸದಸ್ಯರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.