ADVERTISEMENT

ಬೆಳಗಾವಿ ಅಧಿವೇಶನ: ಅಶೋಕ ಹೆಗಲ ಮೇಲೆ ಕೈ ಇಟ್ಟು ಸಿದ್ದರಾಮಯ್ಯ ಆಪ್ತ ಮಾತುಕತೆ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2025, 6:20 IST
Last Updated 8 ಡಿಸೆಂಬರ್ 2025, 6:20 IST
   

ಬೆಳಗಾವಿ: ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುವುದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮಾತುಕತೆ ನಡೆಸಿದರು.

ಈ ವೇಳೆ ಅಶೋಕ ಅವರ ಹೆಗಲಿಗೆ ಕೈ ಇಟ್ಟು ಸಿದ್ದರಾಮಯ್ಯ ಅವರು ಆಪ್ತವಾಗಿ ಮಾತನಾಡಿದ್ದು ಗಮನ ಸೆಳೆಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನದ ಪ್ರಯುಕ್ತ ಸುವರ್ಣಸೌದಲ್ಲಿ ಸ್ಪೀಕರ್ ಯು.ಟಿ.ಖಾದರ್, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಆಡಳಿತ ಪಕ್ಷದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ ಅವರ ಜೊತೆ ಚರ್ಚೆ ನಡೆಸಿದರು.

ADVERTISEMENT

ಸಚಿವರಾದ ಹೆಚ್.ಸಿ.ಮಹದೇವಪ್ಪ, ವೆಂಕಟೇಶ್, ಕಾನೂನು ಸಲಹಗರರಾದ ಪೊನ್ನಣ್ಣ ಅವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.