ADVERTISEMENT

ಭೂ ಪರಿವರ್ತನೆ ಸರಳೀಕರಣ: ಮಸೂದೆ ಅಂಗೀಕಾರ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2022, 21:45 IST
Last Updated 22 ಡಿಸೆಂಬರ್ 2022, 21:45 IST
   

ಬೆಳಗಾವಿ: ಕೃಷಿಭೂಮಿಯಲ್ಲಿ ಸ್ವಂತಕ್ಕೆ ಮನೆ, ಕೃಷಿ ಪರಿಕರಗಳನ್ನು ಸಂಗ್ರಹಿಸಿಡಲು ಕಟ್ಟಡ, ತೋಟದ ಮನೆ ನಿರ್ಮಿಸಿಕೊಳ್ಳಲು ಭೂ ಪರಿವರ್ತನೆಗೆ ರೈತರು ಅರ್ಜಿ ಸಲ್ಲಿಸಿದ ಏಳು ದಿನಗಳ ಒಳಗೇ ಮಂಜೂರಾತಿ ಆದೇಶ ನೀಡುವಂತೆ ಜಿಲ್ಲಾಧಿಕಾರಿಗೆ ಗಡುವು ವಿಧಿಸುವ ಉದ್ದೇಶದಿಂದ ಮಂಡಿಸಿದ ‘ಕರ್ನಾಟಕ ಭೂ ಕಂದಾಯಕಾಯ್ದೆ ತಿದ್ದುಪಡಿ‘ ಮಸೂದೆಗೆ ವಿಧಾನಸಭೆಯಲ್ಲಿ ಗುರುವಾರ ಒಪ್ಪಿಗೆ ನೀಡಲಾಯಿತು.

ಮಸೂದೆ ಕುರಿತು ವಿವರಿಸಿದ ಕಂದಾಯ ಸಚಿವ ಆರ್‌. ಅಶೋಕ, ‘ಕೃಷಿಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ‘ರೈತ ಸ್ನೇಹಿ’ಗೊಳಿಸಲು ತಿದ್ದುಪಡಿ ಮಾಡಲಾಗುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT