ADVERTISEMENT

ಬೆಳಗಾವಿ| ನಾಡಧ್ವಜ ಹಿಡಿದು ಕುಣಿದ ವಿದ್ಯಾರ್ಥಿ ಥಳಿತ ಪ್ರಕರಣ: ನಾಲ್ವರು ವಶಕ್ಕೆ

ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2022, 17:27 IST
Last Updated 2 ಡಿಸೆಂಬರ್ 2022, 17:27 IST
ಬೆಳಗಾವಿಯ ಗೋಗಟೆ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ ಶೆಟ್ಟಿ ಬಣ) ಕಾರ್ಯಕರ್ತರು ಶುಕ್ರವಾರ ಪ್ರತಿಭಟಿಸಿದರು
ಬೆಳಗಾವಿಯ ಗೋಗಟೆ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ ಶೆಟ್ಟಿ ಬಣ) ಕಾರ್ಯಕರ್ತರು ಶುಕ್ರವಾರ ಪ್ರತಿಭಟಿಸಿದರು   

ಬೆಳಗಾವಿ: ‘ಇಲ್ಲಿ ಬುಧವಾರ ನಾಡಧ್ವಜ ಹಿಡಿದು ಕುಣಿದ ವಿದ್ಯಾರ್ಥಿ ಮೇಲೆ ಸಹಪಾಠಿಗಳು ಹಲ್ಲೆ ಮಾಡಿದ ಪ್ರಕರಣ ಸಂಬಂಧ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ’ ಎಂದು ನಗರ ಪೊಲೀಸ್‌ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಹೇಳಿದರು.

‘ನೊಂದ ವಿದ್ಯಾರ್ಥಿ ಟಿಳಕವಾಡಿ ಪೊಲೀಸ್‌ ಠಾಣೆಯಲ್ಲಿ ನೀಡಿದ ದೂರು ಆಧರಿಸಿ ಮೂವರು ಅಪ್ರಾಪ್ತರು, ಒಬ್ಬ ವಯಸ್ಕನ ವಿರುದ್ಧ ಕ್ರಮ ಜರುಗಿಸಲಾಗಿದೆ. ಕಾಲೇಜಿನಲ್ಲಿ ಸೂಕ್ತ ಬಂದೋಬಸ್ತ್‌ ಕೈಗೊಂಡಿದ್ದೇವೆ’ ಎಂದು ತಿಳಿಸಿದರು.

‘ನಾಡಧ್ವಜ ಹಿಡಿದ ವಿದ್ಯಾರ್ಥಿ ಥಳಿಸಿದ ವಿದ್ಯಾರ್ಥಿಗಳೂ ಕನ್ನಡಿಗರೇ ಆಗಿದ್ದಾರೆ. ಈ ವಿಚಾರದಲ್ಲಿ ಭಾಷಾ ವಿವಾದ ತರದಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ’ ಎಂದು ಡಿಸಿಪಿ ರವೀಂದ್ರ ಗಡಾದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.