
ಚಳಿಗಾಲದ ಅಧಿವೇಶನ ಆರಂಭ; ಕಲಾಪ 12.30ಕ್ಕೆ ಮುಂದೂಡಿಕೆ
ಸುವರ್ಣ ವಿಧಾನಸೌಧ(ಬೆಳಗಾವಿ): ಇಲ್ಲಿ ಇದೇ 8ರಿಂದ ಶುರುವಾಗಿ 10 ದಿನ ನಡೆದ ವಿಧಾನಮಂಡಲದ ಅಧಿವೇಶನ ಅನಿರ್ದಿಷ್ಟಾವಧಿ ಅವಧಿಗೆ ಮುಂದೂಡಿಕೆಯಾಯಿತು.
ವಿಧಾನಸಭೆಯಲ್ಲಿ ಒಳ ಮೀಸಲಾತಿಗೆ ಕಾನೂನು ಬಲ ನೀಡುವ ಮಸೂದೆಗಳೂ ಸೇರಿ ಒಟ್ಟು 23 ಮಸೂದೆಗಳು ಅಂಗೀಕರಿಸಲ್ಪಟ್ಟಿವೆ. ದ್ವೇಷ ಭಾಷಣ ಮಾಡುವವರನ್ನು, ಪ್ರಚೋದಿಸಿದವರನ್ನು ಶಿಕ್ಷೆಗೆ ಗುರಿಪಡಿಸಲು ಅವಕಾಶ ಕಲ್ಪಿಸುವ ಮಸೂದೆಯನ್ನು ವಿರೋಧ ಪಕ್ಷಗಳ ತೀವ್ರ ವಿರೋಧ ನಡುವೆಯೂ ಸರ್ಕಾರ ಅಂಗೀಕಾರ ಪಡೆಯಿತು. ಸಾಮಾಜಿಕ ಬಹಿಷ್ಕಾರ ಹಾಕುವವರು, ಅದಕ್ಕೆ ಪೂರಕ ನೆರವು ನೀಡುವವರಿಗೆ ಶಿಕ್ಷೆ ವಿಧಿಸಲು ಅವಕಾಶ ಇರುವ ಮಸೂದೆಗೆ ಎರಡೂ ಸದನಗಳಲ್ಲಿ ಸುದೀರ್ಘ ಚರ್ಚೆಯ ಬಳಿಕ ಅನುಮೋದನೆ ನೀಡಲಾಯಿತು.
ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಮೂರು ಪಕ್ಷಗಳ ಸದಸ್ಯರು ವಿವರವಾಗಿ ಚರ್ಚಿಸಿದರು. ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳ ಕುರಿತು ವಿರೋಧ ಪಕ್ಷಗಳು ಸರ್ಕಾರದ ಗಮನ ಸೆಳೆದವು. ಬೆಳೆ ಹಾನಿ ಮತ್ತು ರೈತರ ಸಂಕಷ್ಟಗಳ ಬಗ್ಗೆಯೂ ಎಲ್ಲ ಸದಸ್ಯರು ಸದನದಲ್ಲಿ ಪ್ರಸ್ತಾಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.