ADVERTISEMENT

ಬೆಳಗಾವಿ–ಬೆಂಗಳೂರು ಸೂಪರ್‌ಫಾಸ್ಟ್‌ ರೈಲು ಪುನರಾರಂಭ

​ಪ್ರಜಾವಾಣಿ ವಾರ್ತೆ
Published 26 ಜೂನ್ 2020, 16:10 IST
Last Updated 26 ಜೂನ್ 2020, 16:10 IST
   

ಹುಬ್ಬಳ್ಳಿ: ಮಾರ್ಚ್‌ನಲ್ಲಿ ಲಾಕ್‌ಡೌನ್‌ ಘೋಷಣೆಯಾದ ಬಳಿಕ ಸ್ಥಗಿತಗೊಂಡಿದ್ದ ಕೆಎಸ್‌ಆರ್‌ ಬೆಂಗಳೂರು–ಬೆಳಗಾವಿ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ವಿಶೇಷ ರೈಲು ಶುಕ್ರವಾರ ಬೆಂಗಳೂರಿನಿಂದ ಪುನರಾರಂಭವಾಗಿದೆ.

ಈ ರೈಲು ಶನಿವಾರದಿಂದ ನಿತ್ಯ ರಾತ್ರಿ 9 ಗಂಟೆಗೆ ಬೆಳಗಾವಿಯಿಂದ ಹೊರಟು ಮರುದಿನ 7.25ಕ್ಕೆ ಬೆಂಗಳೂರು ತಲುಪಲಿದೆ ಎಂದು ನೈರುತ್ಯ ರೈಲ್ವೆಯ ಪ್ರಕಟಣೆ ತಿಳಿಸಿದೆ. ಈ ರೈಲು ಧಾರವಾಡ, ಹುಬ್ಬಳ್ಳಿ, ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಬೀರೂರು, ಅರಸೀಕೆರೆ, ತುಮಕೂರು ಮತ್ತು ಯಶವಂತಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ರದ್ದು: ಲಾಕ್‌ಡೌನ್‌ ತೆರವಾದ ಬಳಿಕ ಮೇ ನಲ್ಲಿ ವಾರದಲ್ಲಿ ಮೂರು ದಿನ ಕೆಎಸ್‌ಆರ್‌ ಬೆಂಗಳೂರು–ಬೆಳಗಾವಿ ನಡುವೆ ಹಗಲಿನಲ್ಲಿ ‌ಸಂಚರಿಸುತ್ತಿದ್ದ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ವಿಶೇಷ ರೈಲಿನ ಸಂಚಾರವನ್ನು ಜೂ. 29ರಿಂದ ಬೆಳಗಾವಿಯಿಂದ, 30ರಿಂದ ಬೆಂಗಳೂರಿನಿಂದ ರದ್ದು ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.