
ಪ್ರಜಾವಾಣಿ ವಾರ್ತೆಬೆಂಗಳೂರಿನ ಅಶೋಕ ಪಿಲ್ಲರ್ ಬಳಿ ಬುಧವಾರ ಮಧ್ಯಾಹ್ನ ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ, 7 ಕೋಟಿ 11 ಲಕ್ಷ ರೂಪಾಯಿ ದರೋಡೆ ಮಾಡಲಾಗಿದೆ. ಹಲವು ದಿನಗಳಿಂದ ಸಂಚು ರೂಪಿಸಿದ್ದ ತಂಡವು ವಾಹನವನ್ನು ಹಿಂಬಾಲಿಸಿ, ಸಿಬ್ಬಂದಿಯನ್ನು ಬೆದರಿಸಿ ಹಣವನ್ನು ದೋಚಿಕೊಂಡು ಪರಾರಿಯಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.