ADVERTISEMENT

ಬೆಂಗಳೂರು ಸ್ಫೋಟ ಸಂಚು: ಮಾಸ್ಟರ್ ಮೈಂಡ್ ನಾಸೀರ್ ಎಂಟು ದಿನ ಸಿಸಿಬಿ ಕಸ್ಟಡಿಗೆ

ಪ್ರಜಾವಾಣಿ ವಿಶೇಷ
Published 27 ಜುಲೈ 2023, 15:58 IST
Last Updated 27 ಜುಲೈ 2023, 15:58 IST

ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ್ದ ಪ್ರಕರಣದ ಪ್ರಮುಖ ಆರೋಪಿ ಟಿ. ನಾಸೀರ್‌ನನ್ನು ಎಂಟು ದಿನಗಳವರೆಗೆ ಸಿಸಿಬಿ ಪೊಲೀಸರ ಕಸ್ಟಡಿಗೆ ವಹಿಸಲಾಗಿದೆ.ಬೆಂಗಳೂರು ಸರಣಿ ಬಾಂಬ್ ಸ್ಫೋಟ ಸೇರಿದಂತೆ 36 ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಸೀರ್‌ ಸದ್ಯ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿದ್ದಾನೆ. ಜೈಲಿನಲ್ಲಿ ಕುಳಿತು ಬಾಂಬ್ ಸ್ಫೋಟಕ್ಕೆ ಈತ ಸಂಚು ರೂಪಿಸಿದ್ದನೆಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಸಿಕ್ಕಿದ ಹಿನ್ನೆಲೆ ಕಸ್ಟಡಿಗಾಗಿ ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.