
ಬಜೆಟ್ ನಿರೀಕ್ಷೆ
ಇತ್ತೀಚೆಗೆ ಬಜೆಟ್ ಎಂಬುದು ಸಾರ್ವಜನಿಕರ ಅಭಿವೃದ್ಧಿ ಮಾಡುವುದಕ್ಕಿಂತ ಹೆಚ್ಚಾಗಿ ಪಟ್ಟಭದ್ರರ ಜೇಬು ತುಂಬಿಸುವ ಲೆಕ್ಕಾಚಾರವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೂಲಸೌಕರ್ಯ ಅಭಿವೃದ್ಧಿ ಹೆಸರಿನಲ್ಲಿ ಸುರಂಗ ಮಾರ್ಗ ನಿರ್ಮಾಣ ಬೇಡ. ಮುಖ್ಯವಾಗಿ ಸಾರ್ವಜನಿಕ ಶೌಚಾಲಯ ನಿರ್ಮಾಣ, ಪಾದಚಾರಿ ಮಾರ್ಗದ ನಿರ್ವಹಣೆ, ಸಂಚಾರ ದಟ್ಟಣೆ ನಿವಾರಣೆ, ರಸ್ತೆ ಗುಂಡಿಗಳು ಮುಚ್ಚುವುದಕ್ಕೆ ಆದ್ಯತೆ ನೀಡಬೇಕು.
ರಮೇಶ್, ಉತ್ತರಹಳ್ಳಿ
ಬೆಂಗಳೂರು ನಗರಕ್ಕೆ ನಿತ್ಯ ಸಾವಿರಾರು ಮಂದಿ ಬಂದು ಹೋಗುತ್ತಾರೆ. ಆದ್ದರಿಂದ ಮುಖ್ಯವಾಗಿ ಸಾರ್ವಜನಿಕ ಶೌಚಾಲಯಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ನಗರದ ಪ್ರತಿಯೊಂದು ವಾರ್ಡ್‌ನಲ್ಲಿ 100 ಕಾರುಗಳು ಹಾಗೂ 200 ದ್ವಿಚಕ್ರ ವಾಹನಗಳನ್ನು ನಿಲುಗಡೆ ಮಾಡುವ ಸೌಲಭ್ಯ ಕಲ್ಪಿಸಬೇಕು.
ಕೆ.ಎಸ್. ನಾಗರಾಜ್, ಹನುಮಂತನಗರ
ಕೆ.ಎಸ್. ನಾಗರಾಜ್ ಹನುಮಂತನಗರ
ಬೆಂಗಳೂರು ನಗರದ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಾಲೆಗೆ ಹೋಗುವ ಮಕ್ಕಳು, ಕೆಲಸಕ್ಕೆ ತೆರಳುವ ನೌಕರರು ಸರಿಯಾದ ಸಮಯಕ್ಕೆ ಕಚೇರಿಗೆ ತಲುಪಲು ಆಗುತ್ತಿಲ್ಲ. ಆದ್ದರಿಂದ ಬಜೆಟ್‌ನಲ್ಲಿ ಮೆಟ್ರೊ, ಸುರಂಗ ರಸ್ತೆ ಮತ್ತು ಮೇಲ್ಸೇತುವೆ ಯೋಜನೆಗಳಿಗೆ ಆದ್ಯತೆ ನೀಡಬೇಕು. ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಬೇಕು.
ಸಿದ್ದು ಮೈದೊಳಲು, ಜ್ಞಾನಭಾರತಿ
ಸಿದ್ದು ಮೈದೊಳಲು ಜ್ಞಾನಭಾರತಿ
ಬೆಂಗಳೂರು ನಗರದ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು. ಇದರ ಜೊತೆಗೆ ಉತ್ತಮ ಸಾರಿಗೆ ಸಂಪರ್ಕದ ವ್ಯವಸ್ಥೆ ಮಾಡಬೇಕು. ಸಂಚಾರ ದಟ್ಟಣೆ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದ ಯೋಜನೆಗಳನ್ನು ರೂಪಿಸಿ, ಅನುಷ್ಠಾನಗೊಳಿಸಬೇಕು. ಮುಂಬರುವ ಬಜೆಟ್‌ನಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಬೇಕು.
ಹನಿಯೂರು ಚಂದ್ರೇಗೌಡ, ಬೆಂಗಳೂರು
ಹನಿಯೂರು ಚಂದ್ರೇಗೌಡ
ಬೆಂಗಳೂರು ನಗರದಲ್ಲಿ ತ್ಯಾಜ್ಯ ವಿಲೇವಾರಿ ಮಾಡುವುದು ಬಹುದೊಡ್ಡ ಸಮಸ್ಯೆ ಆಗಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಮೂಲಕ ನಗರದ ಸ್ವಚ್ಛತೆಗೆ ಒತ್ತು ನೀಡಬೇಕು. ಸಾರ್ವಜನಿಕ ಶೌಚಾಲಯಗಳ ಸಂಖ್ಯೆ ಹೆಚ್ಚಿಸಬೇಕು. ಒಳ ಚರಂಡಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಿ, ಅವುಗಳನ್ನು ನಿರ್ವಹಣೆ ಮಾಡಬೇಕು.
ಶ್ರೀಧರ್ ಹುಟಗಿ, ಬೆಂಗಳೂರು
ಬಜೆಟ್‌ನಲ್ಲಿ ಬೆಂಗಳೂರು ನಗರದ ಅಭಿವೃದ್ಧಿಯ ಜೊತೆಗೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡಬೇಕು. ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆ, ರಸ್ತೆ ಗುಂಡಿಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ತ್ಯಾಜ್ಯ ವಿಲೇವಾರಿಗೆ ಸಮರ್ಪಕ ಯೋಜನೆ ರೂಪಿಸಬೇಕು. ನಗರದಲ್ಲಿ ಇರುವ ಉದ್ಯಾನಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು.
ಸಹನಾ, ಶಿಕ್ಷಕಿ