ADVERTISEMENT

ಬ್ಯಾಟರಾಯನಪುರ: ಬಿಜೆಪಿ ಸೇರಿದ ಕಾಂಗ್ರೆಸ್‌ ನಾಯಕರು

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 17:22 IST
Last Updated 23 ಫೆಬ್ರುವರಿ 2026, 17:22 IST
   

ಬೆಂಗಳೂರು: ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಕೆಂಪಾಪುರ ವಾರ್ಡ್‌ನಲ್ಲಿ ಸ್ಥಳೀಯ ಕಾಂಗ್ರೆಸ್‌ ಮುಖಂಡರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದರು.

ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಎಚ್‌.ಸಿ.ತಮ್ಮೇಶ್‌ಗೌಡ ಅವರು ಈ ಸಂದರ್ಭದಲ್ಲಿ ಕೆಂಪಾಪುರ ವಾರ್ಡ್‌ ಕಾಂಗ್ರೆಸ್ ಅಧ್ಯಕ್ಷ ಟಿ.ರಮೇಶ್, ಹಿಂದುಳಿದ ವರ್ಗಗಳ ಮುಖಂಡ ರಾಜು ಹಾಗೂ ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ತಮ್ಮೇಶ್‌ಗೌಡ ಅವರು, ‘ಪಕ್ಷದ ಸಂಘಟನೆ ಬಲವರ್ಧನೆಯ ದಿಸೆಯಲ್ಲಿ ಸಿಗುವ ಚಿಕ್ಕ ಅವಕಾಶವನ್ನೂ ಕೈಚೆಲ್ಲದೆ, ಕ್ಷೇತ್ರದಲ್ಲಿ ಬಿಜೆಪಿಗೆ ಸುಭದ್ರ ನೆಲೆ ಕಲ್ಪಿಸುವುದರ ಜತೆಗೆ ಮುಂಬರುವ ಸರಣಿ ಚುನಾವಣೆಗಳಲ್ಲಿ ಪಕ್ಷಕ್ಕೆ ಜಯ ತಂದುಕೊಡುವುದು ನಮ್ಮ ಆದ್ಯತೆ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.