ADVERTISEMENT

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ತಾರಕಕ್ಕೇರಿದ ಗುಡುಗು, ಮಿಂಚು, ಗಾಳಿಯ ಅಬ್ಬರ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2020, 14:38 IST
Last Updated 9 ಏಪ್ರಿಲ್ 2020, 14:38 IST
   

ಬೆಂಗಳೂರು: ರಾಜಧಾನಿಯಲ್ಲೀಗ ಗುಡುಗು ಸಹಿತ ಭಾರೀ ಮಳೆ ಸುರಿಯುತ್ತಿದ್ದು, ಸಂಜೆಯವರೆಗೂ ಬೆಚ್ಚಗಿದ್ದ ನಗರವೀಗ ತಂಪಾಗಿದೆ.

ಲಾಕ್‌ಡೌನ್‌ ಕಾರಣ ಬಿಕೋ ಎನ್ನುತ್ತಿರುವ ನಗರದ ರಸ್ತೆಗಳು ನೀರಿನಿಂದ ತುಂಬಿ ತುಳುಕುತ್ತಿವೆ.

ಸಂಜೆ 6 ಗಂಟೆ ವೇಳೆಗೆ ಆರಂಭವಾದ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ಲಾಕ್‌ಡೌನ್‌ನಿಂದ ಬೇಸರಗೊಂಡಿದ್ದ ಜನರಿಗೆ ತುಂಪು ನೀಡಿದೆ.

ADVERTISEMENT

ಬಸವನಗುಡಿ, ಜಯನಗರ, ವಿಜಯನಗರ, ರಾಜಾಜಿನಗರ, ಬನಶಂಕರಿ, ಕೋರಮಂಗಲ ಸೇರಿದಂತೆ ನಗರದ ಪ್ರಮುಖ ಪ್ರದೇಶಗಳಲ್ಲಿ ಮಳೆಯ ಅಬ್ಬರ ಜೋರಾಗಿಯೇ ಇದೆ.

ಧಾರಾಕಾರ ಮಳೆಯ ಜತೆಗೆ ಗಾಳಿಯ ವೇಗವೂ ಹೆಚ್ಚಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.