
ಪ್ರಜಾವಾಣಿ ವಾರ್ತೆ
ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಅನಿಮೇಷನ್ ಇಂಡಸ್ಟ್ರಿ ಅಸೋಸಿಯೇಷನ್ ಸಹಯೋಗದೊಂದಿಗೆ ಇದೇ 27ರಿಂದ ಮಾರ್ಚ್ 1ರವರೆಗೆ ನಗರದ ಲಲಿತ್ ಅಶೋಕ್ ಹೋಟೆಲ್‌ನಲ್ಲಿ 7 ನೇ ಆವೃತ್ತಿಯ ಬೆಂಗಳೂರು ಜಿಎಎಫ್‌ಎಕ್ಸ್ ಶೃಂಗಸಭೆಯನ್ನು ಆಯೋಜಿಸಲಾಗಿದೆ.
ಮೂರು ದಿನಗಳ ಈ ಶೃಂಗಸಭೆಯಲ್ಲಿ ಅನಿಮೇಷನ್, ವಿಎಫ್‌ಎಕ್ಸ್, ಗೇಮಿಂಗ್, ಕಾಮಿಕ್ಸ್ ಇತ್ಯಾದಿ ಮಾಧ್ಯಮಗಳ ಸೃಷ್ಟಿಕರ್ತರು, ಸ್ಟುಡಿಯೋಗಳು ಮತ್ತು ಉದ್ಯಮದ ನಾಯಕರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಶೃಂಗಸಭೆಯನ್ನು ಉದ್ಘಾಟಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.