ADVERTISEMENT

ಬೆಂಗಳೂರು: ಡಿ.ರೂಪಾ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2025, 15:52 IST
Last Updated 5 ಮಾರ್ಚ್ 2025, 15:52 IST
<div class="paragraphs"><p>ಪೊಲೀಸ್</p></div>

ಪೊಲೀಸ್

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ರಾಜ್ಯ ಆಂತರಿಕ ಭದ್ರತಾ ಐಜಿಪಿ ಡಿ.ರೂಪಾ ಅವರನ್ನು ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾಯಿಸಲಾಗಿದೆ.

ADVERTISEMENT

ರೂಪಾ ಅವರು ಕೆಳ ಹಂತದ ಸಿಬ್ಬಂದಿ ಮೂಲಕವಾಗಿ ಅಕ್ರಮವಾಗಿ ಕೆಲವು ದಾಖಲೆಗಳನ್ನು ತೆಗೆದು, ಕೆಲವು ದಾಖಲೆಗಳನ್ನು ಇರಿಸಿದ್ದಾರೆ. ಈ ಸಿಬ್ಬಂದಿ ಅಕ್ರಮವಾಗಿ ಕೊಠಡಿ ಪ್ರವೇಶಿಸಿದ್ದರು ಎಂದು ಆಂತರಿಕ ಭದ್ರತಾ ವಿಭಾಗದ ಡಿಐಜಿ ಆಗಿದ್ದ ವರ್ತಿಕಾ ಕಟಿಯಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ದೂರು ನೀಡಿದ್ದರು.

ಇದರ ಬೆನ್ನಲ್ಲೇ ವರ್ತಿಕಾ ಅವರನ್ನು ವರ್ಗಾವಣೆ ಮಾಡಲಾಗಿತ್ತು. ರೂಪಾ ಅವರನ್ನೂ ಎತ್ತಂಗಡಿ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.