ಇತಿಹಾಸದಲ್ಲಿಯೇ ಮೊದಲ ಬಾರಿಗೆ ಬೆಂಗಳುರಿನಲ್ಲಿ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳ ನ.25 ಮತ್ತು 26 ರಂದು ನಡೆಯುತ್ತಿದ್ದು, ಕಂಬಳದಲ್ಲಿ ಭಾಗವಹಿಸಲು ಈಗಾಗಾಲೆ ಬಾಲಿವುಡ್ ಸೇರಿದಂತೆ ಗಣ್ಯಾತಿಗಣ್ಯರು ಭಾಗವಹಿಸುತ್ತಿದ್ದಾರೆ. ಇನ್ನು ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ ಲೈಂಗಿಕ ಕಿರುಕುಳ ಆರೋಪವನ್ನುಎದುರಿಸುತ್ತಿರುವ ಬಿಜೆಪಿಯ ಸಂಸದ ಬ್ರಿಜ್ ಭೂಷಣ್ ಅವರನ್ನು ಆಹ್ವಾನಿಸಲಾಗಿತ್ತು. ಆದರೆ, ವಿವಿಧ ಸಂಘಟನೆಗಳಿಂದ ಇದಕ್ಕೆ ವಿರೋಧ ವ್ಯಕ್ತವಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಹಾಗೂ ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ಅವರು, ‘ಈ ಕಾರ್ಯಕ್ರಮದಲ್ಲಿ ಬ್ರಿಜ್ ಭೂಷಣ್ ಭಾಗವಹಿಸುತ್ತಿಲ್ಲ.‘ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.