ADVERTISEMENT

ಬೆಂಗಳೂರು– ಮಂಗಳೂರು ಹೆದ್ದಾರಿ ಸಮಸ್ಯೆ ಸಭೆ ನಡೆಸಿದ ಸಚಿವ ಕೃಷ್ಣಬೈರೇಗೌಡ

​ಪ್ರಜಾವಾಣಿ ವಾರ್ತೆ
Published 23 ಜನವರಿ 2026, 16:06 IST
Last Updated 23 ಜನವರಿ 2026, 16:06 IST
ಕೃಷ್ಣಬೈರೇಗೌಡ 
ಕೃಷ್ಣಬೈರೇಗೌಡ    

ಬೆಂಗಳೂರು: ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಬೆಂಗಳೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿ ಹಾಸನ ವ್ಯಾಪ್ತಿಯಲ್ಲಿನ ಕಾಮಗಾರಿಗಳ ಸಮಸ್ಯೆಗಳ ಕುರಿತು ಸಂಸದರು, ಅಧಿಕಾರಿಗಳು ಮತ್ತು ಗುತ್ತಿಗೆದಾರರ ಜತೆ ಶುಕ್ರವಾರ ಸಭೆ ನಡೆಸಿದರು.

‘ಹಾಸನ ಬೈಪಾಸ್‌ 10 ಕಿ.ಮೀ ಉದ್ದವಿದ್ದು, ಇದರ ವ್ಯಾಪ್ತಿಯಲ್ಲಿ ಬರುವ ರೈಲ್ವೇ ಓವರ್‌ ಬ್ರಿಡ್ಜ್‌ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಮೇ ತಿಂಗಳ ಒಳಗೆ ರಸ್ತೆಗಳನ್ನು ಸಂಚಾರಕ್ಕೆ ಮುಕ್ತಗೊಳಿಸಬೇಕು’ ಎಂದು ಅವರು ಸೂಚಿಸಿದರು.

ಸಕಲೇಶಪುರದ ಸಮೀಪ ದೋಣಿಗಾಲ್ ಬಳಿ ಉಳಿದಿರುವ 600 ಮೀಟರ್‌ ರಸ್ತೆಯನ್ನು ತುರ್ತಾಗಿ ಪೂರ್ಣಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಕಳೆದ ಬಾರಿ ಸಕಲೇಶಪುರದಿಂದ ಮಾರ್ನಳ್ಳಿ ಮಧ್ಯೆ ಹಲವು ಕಡೆ ಭೂಕುಸಿತ ಉಂಟಾಗಿತ್ತು. ಈ ಸಂಬಂಧಿತ ಕಾಮಗಾರಿಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅನುಮೋದನೆ ನೀಡಿದೆ. ಹೀಗಾಗಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.