ನಮ್ಮ ಮೆಟ್ರೊ ಹಳದಿ ಮಾರ್ಗ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರು: ‘ದೇಶದ ಮಾಹಿತಿ ತಂತ್ರಜ್ಞಾನ, ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವಲ್ಲಿನ ಪ್ರಗತಿಗೆ ಬೆಂಗಳೂರು ಮತ್ತು ಬೆಂಗಳೂರು ಜನರ ಕೊಡುಗೆ ಅಪಾರವಾದದು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಬೆಂಗಳೂರು ಮೆಟ್ರೊ ಹಳದಿ ಮಾರ್ಗವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.
‘ವಿಶ್ವದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರು ಸ್ಥಾನ ಪಡೆದಿದೆ. ಬೆಂಗಳೂರನ್ನು ಭವಿಷ್ಯಕ್ಕೆ ಸಿದ್ಧಪಡಿಸಲು ಮೆಟ್ರೊ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಬೆಂಗಳೂರು ಈಗ ಅತಿ ಉದ್ದದ ಮೆಟ್ರೊ ಜಾಲಹೊಂದಿರುವ ದೇಶದ ಎರಡನೇ ನಗರವಾಗಿದೆ’ ಎಂದರು.
‘2014ರಲ್ಲಿ ದೇಶದ ಐದು ನಗರಗಳಲ್ಲಿ ಮಾತ್ರವೇ ಮೆಟ್ರೊ ರೈಲು ಮೂಸೌಕರ್ಯ ಇತ್ತು. ಈಗ ದೇಶದ 20 ನಗರಗಳಲ್ಲಿ ಮೆಟ್ರೊ ಇದೆ. ದೇಶದಲ್ಲಿ 1,000 ಕಿ.ಮೀ.ಗೂ ಹೆಚ್ಚು ಉದ್ದದ ಮೆಟ್ರೊ ಜಾಲವಿದೆ. 951 ಕಿ.ಮೀ. ಉದ್ದದ ಮೆಟ್ರೊ ಕಾಮಗಾರಿ ನಿರ್ಮಾಣ ಹಂತದಲ್ಲಿದೆ’ಎಂದು ಮಾಹಿತಿ ನೀಡಿದರು.
ಈ ಹಂತದಲ್ಲಿ ಮೆಟ್ರೊ ಮೂರನೇ ಹಂತದ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.